Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು
Team Udayavani, Dec 11, 2024, 11:18 PM IST
ನವದೆಹಲಿ: ಗಂಡನ ಮನೆಯಲ್ಲಿ ಮಹಿಳೆಗೆ ರಕ್ಷಣೆ ಒದಗಿಸುವ ಸೆಕ್ಷನ್ 498 ಎ ದುರ್ಬಳಕೆ ಹೆಚ್ಚಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ ಅಮಾಯಕರು ಅದಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದೆ.
ಪತ್ನಿ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಅತುಲ್ ಸುಭಾಷ್ ಪ್ರಕರಣದ ಬೆನ್ನಲ್ಲೇ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ. ತೆಲಂಗಾಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ವಿಧಿಸಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಪೀಠ, ಮಹಿಳೆಯ ಆರೋಪದಲ್ಲಿ ಸ್ಪಷ್ಟತೆಯಿಲ್ಲ ಎಂದು ಹೇಳಿ ಹೈಕೋರ್ಟ್ ಆದೇಶ ರದ್ದು ಮಾಡಿದೆ.
ಕೋರ್ಟ್ ಹೇಳಿದ್ದೇನು?: ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯನ್ನು ರಕ್ಷಿಸುವ ಗುರಿ ಹೊಂದಿದ್ದ ಈ ಸೆಕ್ಷನ್ ಅನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅಸಮಂಜಸ ಬೇಡಿಕೆ ಈಡೇರಿಸಿಕೊಳ್ಳುವುದಕ್ಕಾಗಿ ಪತ್ನಿ ಈ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾಳೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
MUST WATCH
ಹೊಸ ಸೇರ್ಪಡೆ
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.