Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ
Team Udayavani, Dec 12, 2024, 12:58 AM IST
ಕುಂದಾಪುರ: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು. ಮೀನುಗಾರಿಕೆ ಕ್ಷೇತ್ರ ವನ್ನು ಅಭಿವೃದ್ಧಿಪಡಿಸಲು ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿ, ಉತ್ಪಾದಕತೆ ಹಾಗೂ ಮೂಲಸೌಕರ್ಯ ಸುಧಾರಣೆ ಯೊಂದಿಗೆ ಆದಾಯ ದ್ವಿಗುಣ ಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶು ವೈದ್ಯಕೀಯ ಮತ್ತು ಹೈನುಗಾರಿಕೆ ಸಚಿವರಿಗೆ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.
ಇದಕ್ಕೆ ಸಚಿವರು, ರಾಜ್ಯಕ್ಕೆ 2020- 21ರಿಂದ 2024-25ನೇ ಸಾಲಿನ ವರೆಗೆ ಒಟ್ಟು 1,056.34 ಕೋರೂ. ಅನುದಾನ ಒದಗಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಯೋಜನೆ ಯಡಿ ಈವರೆಗೆ 17.43 ಕೋ.ರೂ. ಸಹಾಯಧನ ವಿನಿಯೋಗಿಸಲಾಗಿದೆ.
ಮೀನು ಕೃಷಿಕೊಳ, ಸುಧಾರಿತ ಮೀನು ಉತ್ಪಾದನೆ ಘಟಕ ಶೀತಲೀಕರಣ, ಮಂಜುಗಡ್ಡೆ ಕಾರ್ಖಾನೆನಿರ್ಮಾಣ, ಮಂಜುಗಡ್ಡೆ ಘಟಕಗಳ ಆಧುನೀ ಕರಣ,ಮೃದ್ವಂಗಿಗಳ/ಕಪ್ಪೆ ಚಿಪ್ಪು ಸಾಕಾಣಿಕೆಗಾಗಿ ಸಹಾಯ, ಮೀನು ಮಾರಾಟ ಮತ್ತು ಸಾಗಣೆಗೆ ತ್ರಿಚಕ್ರ ಹಾಗೂ ಇನ್ಸುಲೇಟೆಡ್ ವಾಹನಗಳ ಖರೀದಿಗಾಗಿ ಸಹಾಯಧನ-ವಿವಿಧ ಯೋಜನೆಗಳಿಗಾಗಿ ಇದುವರೆಗೆ ಜಿಲ್ಲೆಯಲ್ಲಿ 28,616 ಮಂದಿ ಸಹಾಯ ಧನ ಪಡೆದಿದ್ದಾರೆ ಎಂದು ಸಚಿವರು ತಿಳಿಸಿರುವುದಾಗಿ ಸಂಸದರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ
Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!
Ayodhya; ರಾಮ ಮಂದಿರ ಪೂರ್ಣವೇ ಗುರಿ: ಪೇಜಾವರ ಶ್ರೀ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
MUST WATCH
ಹೊಸ ಸೇರ್ಪಡೆ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.