KSRTC: ಮಂಗಳೂರು-ಕಾರ್ಕಳ ಕೆಎಸ್ಸಾರ್ಟಿಸಿ ಪ್ರಾಯೋಗಿಕ ಸಂಚಾರ ಆರಂಭ…
ಮೊದಲ ದಿನವೇ ಉತ್ತಮ ಸ್ಪಂದನೆ
Team Udayavani, Dec 12, 2024, 9:22 AM IST
ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.
ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.
ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ.
ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ.
ಇದನ್ನೂ ಓದಿ: Tragedy: 57 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.