Advocate Jeeva case: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಜಾಮೀನು ಅರ್ಜಿ ವಜಾ
Team Udayavani, Dec 12, 2024, 12:12 PM IST
ಬೆಂಗಳೂರು: ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 23ನೇ ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ.
ಭೋವಿ ನಿಗಮದಲ್ಲಿ ಫಲಾನುಭವಿಗಳ ಸೋಗಿನಲ್ಲಿ ಕೋಟ್ಯಂತರ ರೂ. ಸಾಲ ಪಡೆದ ಅವ್ಯವಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ಸಿಐಡಿಯು ಪ್ರತ್ಯೇಕ ನಾಲ್ಕು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣವೊಂದರಲ್ಲಿ ತನಿಖಾಧಿಕಾರಿ ಯಾಗಿದ್ದ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮೀ ವಿಚಾರಣೆ ನೆಪದಲ್ಲಿ ತನ್ನ ಬಳಿ 25 ಲಕ್ಷ ರೂ.ಗೆ ಬೇಡಿಕೆಯಿಟ್ಟು ಮಾನಸಿಕ ಕಿರುಕುಳ ನೀಡಿದ್ದರು. ಜತೆಗೆ ವಿವಸ್ತ್ರಗೊಳಿಸಿ ಅಮಾನವೀ ಯವಾಗಿ ನಡೆದುಕೊಂಡಿದ್ದರು ಎನ್ನಲಾಗಿದೆ. ಅದರಿಂದ ಮನನೊಂದ ಜೀವಾ ನ.22ರಂದು ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮೊದಲು ಡೆತ್‌ನೋಟ್ ನಲ್ಲಿ ಡಿವೈಎಸ್ಪಿ ಹೆಸರು ಉಲ್ಲೇಖೀಸಿದ್ದರು.
ಈ ಸಂಬಂಧ ಮೃತ ಜೀವಾ ಸಹೋದರಿ ಸಂಗೀತಾ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ ಆಯುಕ್ತ ದಯಾನಂದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.ಮತ್ತೂಂದೆಡೆ ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರತ್ಯೇಕ ಎಸ್‌ಐಟಿ ರಚಿಸಿತ್ತು. ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿ ಕಾರಿ ನಿಶಾ ಜೇಮ್ಸ್ ಸೇರಿ ಮೂವರು ಅಧಿಕಾರಿಗಳ ವಿಶೇಷ ತಂಡ ತನಿಖೆ ನಡೆಸು ತ್ತಿದೆ. ಈ ಬೆನ್ನಲ್ಲೇ ಕನಕಲಕ್ಷ್ಮೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ,ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣ ಗಂಭೀರ ಸ್ವರೂಪದಾದ್ದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.