AAP: ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂ… ಕೇಜ್ರಿವಾಲ್ ಘೋಷಣೆ
Team Udayavani, Dec 12, 2024, 3:20 PM IST
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ಅದರಂತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂಪಾಯಿಗಳನ್ನು ಜಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ದೆಹಲಿಯ ಕಚೇರಿಯಲ್ಲಿ ಮುಖ್ಯಮಂತ್ರಿ ಅತಿಷಿ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಹೇಳಿದ ಕೇಜ್ರಿವಾಲ್ ಈ ಹಿಂದೆ ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇವೆ ಮಂದಿನ ಚುನಾವಣೆಯಲ್ಲಿ ನಮ್ಮದೇ ಸರಕಾರ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿರುವ ಹದಿನೆಂಟು ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಮಹಿಳೆಯರ ಖಾತೆಗೆ 2100 ರೂಪಾಯಿ ಖಾತೆಗೆ ಜಮೆ ಮಾಡುವುದಾಗಿ ಹೇಳಿದ್ದಾರೆ.
ಈ ಹಿಂದೆ ಮಹಿಳಾ ಸಮ್ಮಾನ್ ಯೋಜನೆಯಡಿ ಪ್ರತಿ ತಿಂಗಳು ಒಂದು ಸಾವಿರ ನೀಡುವುದಾಗಿ ಭರವಸೆ ನೀಡಲಾಗಿತ್ತು ಇದಕ್ಕೆ ಕೆಲ ಮಹಿಳೆಯರು ದೇಶದಲ್ಲಿ ವಸ್ತುಗಳ ಬೆಲೆ ಹೆಚ್ಚಾಗಿದೆ ಹಾಗಾಗಿ ಒಂದು ಸಾವಿರ ಸಾಕಾಗುವುದಿಲ್ಲ ಇದರ ಮೊತ್ತವನ್ನು ಹೆಚ್ಚಿಸುವಂತೆ ಕೇಳಿಕೊಂಡಿದ್ದರು ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಹಿಳಾ ಸಮ್ಮಾನ್ ಯೋಜನೆಯಡಿ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರ ಖಾತೆಗೆ 2100 ಹಣವನ್ನು ಜಮೆ ಮಾಡುವ ಭರವಸೆಯನ್ನು ನೀಡಿದ್ದಾರೆ.
केजरीवाल है Accounts का जादूगर💰🪄
मुझे पता है कि पैसे कहां से कैसे बचाने हैं और पैसे कहां लगाने हैं। BJP वालों, तुम चिंता मत करो…@ArvindKejriwal#KejriwalMahilaSammanYojna pic.twitter.com/2yTBsH5x4r
— Aam Aadmi Party Delhi (@AAPDelhi) December 12, 2024
ನೋಂದಣಿ ಮಾಡಬೇಕು:
ಹದಿನೆಂಟು ವರ್ಷ ಮೇಲ್ಪಟ್ಟ ಮಹಿಳೆಯರ ಖಾತೆಗೆ ಹಣ ಜಮೆಯಾಗಬೇಕಾದರೆ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು, ನೋಂದಣಿ ಮಾಡಿದರೆ ಮಾತ್ರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಶುಕ್ರವಾರದಿಂದ ನೋಂದಣಿ ಆರಂಭಗೊಳ್ಳಲಿದ್ದು ಮಹಿಳೆಯರು ಆದಷ್ಟು ಬೇಗ ನೋಂದಣಿ ಮಾಡಿಕೊಳ್ಳಿ ಎಂದು ವಿನಂತಿಸಿದ್ದಾರೆ.
ಬಿಜೆಪಿ ಟೀಕೆಗೆ ಕೇಜ್ರಿವಾಲ್ ಪ್ರತ್ಯುತ್ತರ:
ದೆಹಲಿ ಜನತೆಗೆ ಕೇಜ್ರಿವಾಲ್ ಸುಳ್ಳು ಭರವಸೆಗಳನ್ನು ನೀಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಮಹಿಳೆಯರ ಖಾತೆಗೆ ಹಣ ಹಾಕಲು ಕೇಜ್ರಿವಾಲ್ ಜಾದೂ ಮಾಡಬೇಕು ಇಲ್ಲದಿದ್ದರೆ ದೆಹಲಿ ಸರಕಾರದ ಬಳಿ ಅಷ್ಟೊಂದು ಹಣ ಎಲ್ಲಿದೆ ಎಂದು ಬಿಜೆಪಿ ಕಿಡಿಕಾರಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಹೌದು ದೆಹಲಿ ಜನತೆಗೆ ನಾನು ಜಾದೂಗಾರನೇ ನಾನು ಏನು ಹೇಳಿದ್ದೇನೋ ಅದನ್ನು ಮಾಡೇ ಮಾಡುತ್ತೇನೆ ಹಣ ಎಲ್ಲಿಂದ ಉಳಿಸಬೇಕು ಎಲ್ಲಿ ಖರ್ಚು ಮಾಡಬೇಕು ಎಂಬುದು ತನಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Rewind: 2024ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಯಾವುದು? ಓದಿ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh; ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ
Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ
SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು
One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ
Heavy Rain: ತಮಿಳುನಾಡಿನ 10 ಜಿಲ್ಲೆಗಳ ಶಾಲೆಗಳಿಗೆ ಇಂದು (ಡಿ.12) ರಜೆ
MUST WATCH
ಹೊಸ ಸೇರ್ಪಡೆ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Chhattisgarh; ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ
World Chess ರೋಚಕ ಫೈನಲ್; ಡಿಂಗ್ ಸೋಲಿಸಿದ ಗುಕೇಶ್: ಅತ್ಯಂತ ಕಿರಿಯ ವಿಶ್ವ ಚಾಂಪಿಯನ್
Panchamasali ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ : ಹೆಬ್ಬಾಳ್ಕರ್ ಕಿಡಿ
Captains’ clash: ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ; ನಾಯಕನಾಗಿ ಯಾರು ಉತ್ತಮರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.