Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
Team Udayavani, Dec 13, 2024, 11:50 AM IST
ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳಿದರು.
ಕಾನೂನಿನ ಮುಂದೆ ಎಲ್ಲರೂ ಸಮಾನರು: ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ: ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರು, ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು: ಮೀಸಲಾತಿ ವಿಚಾರವಾಗಿ ಮುಂದಿನ ನಡೆ ಕುರಿತ ಪ್ರಶ್ನೆಗೆ ಸಿದ್ದರಾಮಯ್ಯ, ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಮೀಸಲಾತಿ ವಿಚಾರವೆಲ್ಲ ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ ಶೇ.2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ.2 ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.
ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು: ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ, ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಸಿಎಂ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BMTC: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
Renukaswamy Case: ದರ್ಶನ್, ಪವಿತ್ರಾಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
Chikkamagaluru: ಲಾಠಿಚಾರ್ಜ್ ಬಗ್ಗೆ ಗೃಹ ಸಚಿವರಿಂದ ದಾಷ್ಟ್ಯದ ಮಾತು: ಸಿ.ಟಿ.ರವಿ ಟೀಕೆ
Holehonnur: ಪ್ರತ್ಯೇಕ ಅಪಘಾತ… ಇಬ್ಬರು ಮೃತ್ಯು, ಓರ್ವನಿಗೆ ಗಾಯ
MUST WATCH
ಹೊಸ ಸೇರ್ಪಡೆ
Akhilesh Yadav; ಮುಸ್ಲಿಮರನ್ನು ‘ಎರಡನೇ ದರ್ಜೆ’ ಪ್ರಜೆಗಳಾಗಿಸಲು ಪ್ರಯತ್ನಗಳು ನಡೆಯುತ್ತಿವೆ
Rashtrotthana Parishat : ಚೇರ್ಕಾಡಿಯಲ್ಲಿ ಸಿಬಿಎಸ್‌ಇ ಶಾಲೆ, ಪ.ಪೂ. ಕಾಲೇಜು ಪ್ರಾರಂಭ
Pakistan: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ʼಮತ್ತೆʼ ವಿದಾಯ ಹೇಳಿದ ಪಾಕಿಸ್ತಾನದ ಆಲ್‌ರೌಂಡರ್
Atul Subhash ಪ್ರಕರಣ; ಯುಪಿಯಲ್ಲಿರುವ ಪತ್ನಿಯ ಮನೆಗೆ ನೋಟಿಸ್ ಅಂಟಿಸಿದ ಬೆಂಗಳೂರು ಪೊಲೀಸರು
Gangolli Election:ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಕೈ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.