Atul Subhash ಪ್ರಕರಣ; ಯುಪಿಯಲ್ಲಿರುವ ಪತ್ನಿಯ ಮನೆಗೆ ನೋಟಿಸ್ ಅಂಟಿಸಿದ ಬೆಂಗಳೂರು ಪೊಲೀಸರು
ನಿಕಿತಾ ಸಿಂಘಾನಿಯಾಗೆ ಸಮನ್ಸ್.. ಮೂರು ದಿನಗಳೊಳಗೆ ಹಾಜರಾಗಬೇಕು
Team Udayavani, Dec 13, 2024, 6:10 PM IST
ಜೌನ್‌ಪುರ (ಉತ್ತರಪ್ರದೇಶ): ಬೆಂಗಳೂರಿನಲ್ಲಿ ಟೆಕಿ ಅತುಲ್ ಸುಭಾಷ್ ಅವರ ಆತ್ಮಹ*ತ್ಯೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ತನಿಖೆಯ ಭಾಗವಾಗಿ ಬೆಂಗಳೂರು ನಗರ ಪೊಲೀಸರು ಶುಕ್ರವಾರ(ಡಿ13) ಅವರ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸಬ್ ಇನ್ಸ್‌ಪೆಕ್ಟರ್ ಸಂಜೀತ್ ಕುಮಾರ್ ನೇತೃತ್ವದ ನಾಲ್ವರ ಬೆಂಗಳೂರು ನಗರ ಪೊಲೀಸರ ತಂಡವು ಉತ್ತರ ಪ್ರದೇಶ ಜಿಲ್ಲೆಯ ಖೋವಾ ಮಂಡಿ ಪ್ರದೇಶದಲ್ಲಿರುವ ಸಿಂಘಾನಿಯಾಳ ನಿವಾಸಕ್ಕೆ ಬೆಳಗ್ಗೆ 11 ಗಂಟೆ ಸುಮಾರಿಗೆ ತೆರಳಿ ಸಮನ್ಸ್‌ಗಾಗಿ ನೋಟಿಸ್ ಅಂಟಿಸಿದೆ.
ನಗರ ಸರ್ಕಲ್ ಆಫೀಸರ್ ಆಯುಷ್ ಶ್ರೀವಾಸ್ತವ ಅವರ ಪ್ರಕಾರ, ಬೆಂಗಳೂರು ನಗರ ಪೊಲೀಸ್ ನೋಟಿಸ್‌ನಲ್ಲಿ “ನಿಕಿತಾ ಸಿಂಘಾನಿಯಾ ತನ್ನ ಪತಿ ಅತುಲ್ ಸುಭಾಷ್ ಸಾವಿನ ಸುತ್ತಲಿನ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿಯ ಮುಂದೆ ಮೂರು ದಿನಗಳೊಳಗೆ ಹಾಜರಾಗುವಂತೆ ಸೂಚಿಸಲಾಗಿದೆ
” ನೋಟಿಸ್, ಕೇವಲ ಸಿಂಘಾನಿಯಾಳನ್ನು ಮಾತ್ರ ಉದ್ದೇಶಿಸಿ ನೀಡಲಾಗಿದ್ದು, ಎಫ್‌ಐಆರ್‌ನಲ್ಲಿ ಹೆಸರಿರುವ ಆಕೆಯ ತಾಯಿ ನಿಶಾ ಸಿಂಘಾನಿಯಾ, ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಸೇರಿದಂತೆ ಇತರ ಆರೋಪಿ ಕುಟುಂಬ ಸದಸ್ಯರನ್ನು ನೋಟಿಸ್ ಉಲ್ಲೇಖಿಸಿಲ್ಲ.
34 ರ ಹರೆಯದ ಟೆಕಿ ಸುಭಾಷ್ ಡಿಸೆಂಬರ್ 9 ರಂದು ಬೆಂಗಳೂರಿನಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ ನಲ್ಲಿ ಪತ್ನಿ ಮತ್ತು ಆಕೆಯ ಕುಟುಂಬದವರ ಕಿರುಕುಳದಿಂದ ಆತ್ಮಹ*ತ್ಯೆ ಮಾಡಿಳ್ಳುತ್ತಿದ್ದೇನೆ ಎಂದು ಹಲವು ಪುಟಗಳ ನೋಟ್ ನಲ್ಲಿ ಉಲ್ಲೇಖಿಸಿದ್ದರು. ಸಿಂಘಾನಿಯಾ ಮತ್ತು ಆಕೆಯ ಕುಟುಂಬ ಸದಸ್ಯರ ವಿರುದ್ಧ ಆತ್ಮಹ*ತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದೆ.
ಈ ಪ್ರಕರಣ ದೇಶಾದ್ಯಂತ ಸುದ್ದಿ ಮಾಡುತ್ತಿದ್ದು,ಕೌಟುಂಬಿಕ ಕಾನೂನು ದುರುಪಯೋಗ ಮಾಡಿಕೊಂಡು ಸುಭಾಷ್ ಅವರ ಜೀವನ ಅಂತ್ಯಕ್ಕೆ ಕಾರಣವಾಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ahmedabad: ಬ್ರಿಟಿಷ್ ಬ್ಯಾಂಡ್ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ
NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ahmedabad: ಬ್ರಿಟಿಷ್ ಬ್ಯಾಂಡ್ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ
Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್ ಟಿಕೆಟ್
ಕಟ್ಟೆಮಾಡು ದೇಗುಲ ವಸ್ತ್ರ ಸಂಹಿತೆೆ ವಿವಾದ: ಆಡಳಿತ ಮಂಡಳಿ ಸಭೆಯಲ್ಲಿ ಮೂಡದ ಒಮ್ಮತ
Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್ ಚುನಾವಣೆ ಸಾಧ್ಯತೆ?
Crime-follow up;ಇ.ಡಿ. ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆ: 4 ತಂಡಗಳಿಂದ ತನಿಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.