Kumbh; ಕುಂಭಮೇಳ ಮಾಹಿತಿಗೆ ಎಐ ಚಾಟ್‌ಬಾಟ್
ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಮಾಹಿತಿ ಲಭ್ಯ, ಭಕ್ತರು, ಪ್ರಯಾಣಿಕರಿಗೆ ನೆರವು ನೀಡಲು ಸಹಕಾರಿ
Team Udayavani, Dec 14, 2024, 6:15 AM IST
ಪ್ರಯಾಗ್‌ರಾಜ್: ಭಾರತ ತಂತ್ರಜ್ಞಾನದಲ್ಲಿ ಸಾಧಿಸುತ್ತಿರುವ ಪ್ರಗತಿಯನ್ನು ಕುಂಭಮೇಳಕ್ಕೂ ವಿಸ್ತರಿಸಿದ್ದು, ಭಕ್ತರು ಮತ್ತು ಪ್ರಯಾಣಿಕರಿಗೆ ನೆರವು ನೀಡುವುದಕ್ಕಾಗಿ ಕೃತಕ ಬುದ್ಧಿಮತ್ತೆ ಚಾಟ್‌ಬಾಟನ್ನು ಸ್ಥಾಪನೆ ಮಾಡಿದೆ.
Kumbh Sah’AI’yak ಹೆಸರಿನ ಈ ಚಾಟ್‌ಬಾಟ್ ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇದೊಂದು ಆ್ಯಪ್ ಆಗಿದ್ದು, “ಓಲಾ ಕೃತ್ರಿಮ್’ ಇದನ್ನು ತಯಾರು ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ, ಮಲಯಾಳ, ಉರ್ದು, ಗುಜರಾತಿ, ಪಂಜಾಬಿ ಮತ್ತು ಬೆಂಗಾಲಿಗಳಲ್ಲಿ ಇದು ಮಾಹಿತಿ ಒದಗಿಸಲಿದೆ.
ಅಲ್ಲದೇ ಇಡೀ ಕುಂಭಮೇಳದ ಮ್ಯಾಪ್ ಒದಗಿಸಲಿದ್ದು, ಕುಂಭಮೇಳದ ಇತಿಹಾಸ, ಪದ್ಧತಿ ಸೇರಿದಂತೆ ಹಲವು ಮಾಹಿತಿಯನ್ನು ಒದಗಿಸಲಿದೆ.
5,500 ಕೋಟಿ ರೂ. ಮೌಲ್ಯದ ಯೋಜನೆ ಉದ್ಘಾಟಿಸಿದ ಮೋದಿ
ಮಹಾಕುಂಭ ಮೇಳದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಶುಕ್ರವಾರ 5,500 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. 7 ರೈಲ್ವೇ ಮೇಲ್ಸೇತುವೆ, ದ್ವಿಪದ ಮಾರ್ಗಗಳು, ಕಲುಷಿತ ನೀರು ಶುದ್ಧೀಕರಣ ಘಟಕ, ವಿದ್ಯುತ್ ಪೂರೈಕೆ, ದೇವಾಲಯಗಳ ಕಾರಿಡಾರ್ ಸೇರಿದಂತೆ 167 ಅಭಿವೃದ್ಧಿ ಯೋಜನೆಗಳು ಇದರಲ್ಲಿ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.