Tabla Maestro Alive: ತಬಲಾ ಮಾಂತ್ರಿಕ ಉಸ್ತಾದ್ ಜಾಕೀರ್ ಹುಸೇನ್ ಸ್ಥಿತಿ ಗಂಭೀರ
ಮೃತಪಟ್ಟಿದ್ದಾರೆಂದು ಹಬ್ಬಿದ್ದ ಸುದ್ದಿ ಸುಳ್ಳು: ತಡರಾತ್ರಿ ಕುಟುಂಬದಿಂದ ಸ್ಪಷ್ಟನೆ, ಆರೋಗ್ಯಕ್ಕಾಗಿ ಪ್ರಾರ್ಥಿಸುವಂತೆ ಮನವಿ, ಕೇಂದ್ರ ಮಾಹಿತಿ ಸಚಿವಾಲಯವೂ ಟ್ವೀಟ್
Team Udayavani, Dec 16, 2024, 7:30 AM IST
ಸ್ಯಾನ್‌ಫ್ರಾನ್ಸಿಸ್ಕೋ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಸಂಗೀತ ಲೋಕದ ಗಾರು ಡಿಗ, ಖ್ಯಾತ ತಬಲಾ ವಾದಕ, ಉಸ್ತಾದ್ ಜಾಕೀರ್ ಹುಸೇನ್ (73) ಅವರು ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಮ್ಯಾನೇಜರ್ ನಿರ್ಮಲಾ ಬಚಾನಿ, “ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ನಾವು ಅವರ ಅಭಿಮಾನಿಗಳನ್ನು ಮನವಿ ಮಾಡುತ್ತೇವೆ’ ಎಂದಿದ್ದಾರೆ.
ಸಾವಿನ ಸುದ್ದಿ ಸುಳ್ಳು: ಇದಕ್ಕೂ ಮುನ್ನ ಜಾಕೀರ್ ಅವರು ನಿಧನ ಹೊಂದಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸುದ್ದಿ ಪ್ರಕಟಿಸಿತ್ತು. ದೇಶ-ವಿದೇಶಗಳ ಅನೇಕ ಗಣ್ಯರು ಕೂಡ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು.
ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸ್ಪಷ್ಟನೆ ನೀಡಿ, ಸಾವಿನ ಸುದ್ದಿಯನ್ನು ಅಲ್ಲಗಳೆದಿದ್ದಾರೆ. “ದಯವಿಟ್ಟು ವದಂತಿ ಹಬ್ಬಿಸಬೇಡಿ. ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೆ, ಅವರು ಇನ್ನೂ ನಮ್ಮ ಜತೆಗಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ’ ಎಂದು ಅವರ ಸಹೋದರಿ ಖುರ್ಷಿದ್ ಔಲಿಯಾ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Ayodhya’s Shri Ram Mandir: ಅಯೋಧ್ಯೆ ರಾಮಮಂದಿರ ಯೋಜನೆಗೆ ಸ್ವೋ ರ್ಡ್ ಆಫ್ ಆನರ್ ಕಿರೀಟ
Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ ಯಾನ
MUST WATCH
ಹೊಸ ಸೇರ್ಪಡೆ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
ಆಳ್ವಾಸ್ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ
Bigg Boss Telugu 8: ಬಿಗ್‌ಬಾಸ್ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.