Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Team Udayavani, Dec 16, 2024, 1:31 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಇಂದಿನ ಆಧುನಿಕ, ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದರೂ, ಮೌಡ್ಯ, ಕಂದಾಚಾರಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ ಬಾಲ್ಯ ವಿವಾಹಗಳಿಗೆ ಕಡಿವಾಣ ಬಿದ್ದಿಲ್ಲ.
ಈ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಬಾಲ್ಯ ವಿವಾಹಗಳನ್ನು ತಡೆವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಆರ್.ಹೆಬ್ವಾಳ್ಕರ್ ಅವರು “ಬಾಲ್ಯ ವಿವಾಹ ಮುಕ್ತ’ ಗ್ರಾಪಂಗಳಿಗೆ 50 ಸಾವಿರ ರೂ. ಬಹುಮಾನ ಘೋಷಿಸಿದರೂ ರಾಜ್ಯದಲ್ಲಿ ಬಾಲ್ಯವಿವಾಹಗಳು ನಡೆಯುತ್ತಿವೆ. ಈ ಪೈಕಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ 2023-24ನೇ ಸಾಲಿನಲ್ಲಿ ದಾಖಲಾಗಿರುವ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಚಿತ್ರದುರ್ಗ ಅಗ್ರಸ್ಥಾನ ಪಡೆದಿದೆ. ಕಳೆದ 3 ವರ್ಷದಲ್ಲಿ ರಾಜ್ಯಾದ್ಯಂತ ಒಟ್ಟು 1,465 ಬಾಲ್ಯವಿವಾಹದ ಪ್ರಕರಣಗಳು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ದಾಖಲಾಗಿರುವುದು ಸರ್ಕಾರದ ಮೂಲಗಳೇ ತಿಳಿಸಿವೆ. ಈ ಪೈಕಿ 2021-22ನೇ ಸಾಲಿನಲ್ಲಿ 418 ಪ್ರಕರಣಗಳು ದಾಖಲಾಗಿದ್ದರೆ, 2022-23ನೇ ಸಾಲಿನಲ್ಲಿ 328 ಪ್ರಕರಣಗಳು ಹಾಗೂ 2023-24ನೇ ಸಾಲಿನಲ್ಲಿ 719 ಬಾಲ್ಯ ವಿವಾಹಗಳು ನಡೆದ ಪ್ರಕರಣ ದಾಖಲಾಗಿವೆ.
ಒಟ್ಟಾರೆ ಮೂಲಗಳ ಅಂಕಿ-ಅಂಶ ಪ್ರಕಾರ 204 ಬಾಲ್ಯ ವಿವಾಹ ನಡೆದು ಮಂಡ್ಯ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಶಿವಮೊಗ್ಗದಲ್ಲಿ 148, ಮೈಸೂರಿನಲ್ಲಿ 139, ಬಾಗಲಕೋಟೆಯಲ್ಲಿ 86, ವಿಜಯಪುರದಲ್ಲಿ 79 ಬಾಲ್ಯ ವಿವಾಹಗಳು ಜರುಗಿವೆ. ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 719 ಬಾಲ್ಯ ವಿವಾಹಗಳು ನಡೆದಿವೆ. 2022-23ನೇ ಸಾಲಿನಲ್ಲಿ ಕೇವಲ 5 ಪ್ರಕರಣಗಳು ದಾಖಲಾಗಿದ್ದರೆ, 2022-23ನೇ ಸಾಲಿನಲ್ಲಿ 84 ಬಾಲ್ಯ ವಿವಾಹ ಪ್ರಕರಣ ದಾಖಲಾಗಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಅಷ್ಟೇ ಅಲ್ಲದೇ, ಕೋಲಾರ ಜಿಲ್ಲೆಯಲ್ಲಿ 80 ಪ್ರಕರಣಗಳು, ಶಿವಮೊಗ್ಗದಲ್ಲಿ 79, 2022-23ನೇ ಸಾಲಿನಲ್ಲಿ ಕೇವಲ 3 ಪ್ರಕರಣಗಳು ದಾಖಲಾಗಿರುವ ವಿಜಯನಗರ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 72, ಮೈಸೂರು ಜಿಲ್ಲೆಯಲ್ಲಿ 70, ಮಂಡ್ಯ ಜಿಲ್ಲೆಯಲ್ಲಿ 66 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಬಾಲ್ಯವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿ ಗಳಿಗೂ ಬಾಲ್ಯ ವಿವಾಹಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ. ಜತೆಗೆ ಅಂಗನವಾಡಿ ಕಾರ್ಯಕರ್ತೆ ಯರಿಗೂ ಬಾಲ್ಯ ವಿವಾಹ ನಡೆಯುವ ಮಾಹಿತಿ ತಿಳಿದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. –ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
–ಭಾರತಿ ಸಜ್ಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.