Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಸಂದರ್ಶನ...ಮಹತ್ವದ ಸಂಗತಿ ಬಹಿರಂಗ
Team Udayavani, Dec 16, 2024, 6:05 PM IST
ಹೈದರಾಬಾದ್: ಇನ್ಮುಂದೆ ತಿರುಮಲ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ದರ್ಶನ ಪಡೆಯುವ ಭಕ್ತರಿಗೆ ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಹೌದು ತಿರುಮಲ ತಿಮ್ಮಪ್ಪನ ದರ್ಶನ ಪಡೆಯಲು ಈಗ ಹಲವು ಗಂಟೆಗಳ ಕಾಲ ಭಕ್ತರು ಕಾಯಬೇಕಾಗಿದೆ. ಆದರೆ ಇದೀಗ ಕೃತಕ ಬುದ್ಧಿಮತ್ತೆ (Artificial Intelligence) ಮೂಲಕ Facial Recognition (ಮುಖದ ಗುರುತು ಪತ್ತೆ) ತಂತ್ರಜ್ಞಾನ ಅಳವಡಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿ ನಿರ್ಧರಿಸಿದ್ದು, ಇದರಿಂದಾಗಿ ಭಕ್ತರಿಗೆ ಶೀಘ್ರವೇ ತಿಮ್ಮಪ್ಪನ ದರ್ಶನ ಪಡೆಯಲು ಅನುಕೂಲವಾಗಲಿದೆ ಎಂದು ವರದಿ ತಿಳಿಸಿದೆ.
ಈ ವಿಷಯದ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಬಿಎಸ್ ಎನ್ ಮಲ್ಲೇಶ್ವರ ರಾವ್ ಅವರ ಎಕ್ಸ್ ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿರುವ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಇನ್ನು ಆರು ತಿಂಗಳೊಳಗೆ ಎಐ ಪವರ್ಡ್ ಸಿಸ್ಟಮ್ ಅನುಷ್ಠಾನಕ್ಕೆ ಬರಲಿದೆ ಎಂಬ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಒಂದು ಬಾರಿ ಈ ನೂತನ ಎಐ ವ್ಯವಸ್ಥೆ ಅನುಷ್ಠಾನಗೊಂಡಲ್ಲಿ ಸಾಮಾನ್ಯ ಭಕ್ತರೂ ಕೂಡಾ ಕೇವಲ ಒಂದು ಗಂಟೆಯೊಳಗೆ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ ಎಂದು ನಾಯ್ಡು ಅವರು ತಿಳಿಸಿದ್ದಾರೆ.
ತಿರುಮಲ ಮತ್ತು ತಿರುಪತಿಯಲ್ಲಿ ಈಗಾಗಲೇ ಬೆಂಗಳೂರು ಮೂಲದ ಕಂಪನಿಯೊಂದು ಈ ಮಹತ್ವದ ಯೋಜನೆಯ ತಯಾರಿಯಲ್ಲಿ ತೊಡಗಿರುವುದಾಗಿ ನಾಯ್ಡು ಅವರು ತಿಳಿಸಿದ್ದು, ಇದರೊಂದಿಗೆ ತಿರುಮಲವನ್ನು ಸ್ಮಾರ್ಟ್ ಸಿಟಿಯನ್ನಾಗಿ ಪರಿವರ್ತಿಸುವ ಕನಸು ಹೊಂದಿರುವುದಾಗಿ ಹೇಳಿದ್ದಾರೆ.
ತಿರುಮಲದ ಪುರಾತನ ವೈಭವವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕೈಗೊಳ್ಳಲು ಬೇಕಾದ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಅವರು ಪೂರ್ಣಪ್ರಮಾಣದಲ್ಲಿ ಬೆನ್ನೆಲುಬಾಗಿ ನಿಂತಿರುವುದಾಗಿ ಬಿಆರ್ ನಾಯ್ಡು ತಿಳಿಸಿದ್ದಾರೆ.
ಪ್ರತಿಯೊಬ್ಬ ಭಕ್ತರೂ ಭಗವಾನ್ ವೆಂಕಟೇಶ್ವರ ಸ್ವಾಮಿಯ ದರ್ಶನವನ್ನು ಒಂದು ಗಂಟೆಯೊಳಗೆ ಪಡೆಯುವಂತಾಗಬೇಕು ಎಂಬುದು ನಮ್ಮ ಮಹತ್ವದ ಗುರಿಯಾಗಿದೆ. ಇದನ್ನು ನಾವು ಸಾಧಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಉಪಯೋಗಿಸಲ್ಪಡುವ ಡಿಜಿ ಯಾತ್ರಾ ವ್ಯವಸ್ಥೆಯ ತಂತ್ರಜ್ಞಾನದಿಂದ ಪ್ರಭಾವಿತರಾಗಿ ನಾವು ಎಐ ತಂತ್ರಜ್ಞಾನದ ಮೊರೆ ಹೋಗಲು ನಿರ್ಧರಿಸಿದ್ದೇವೆ. ಹೀಗೆ ಎಐ ತಂತ್ರಜ್ಞಾನ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಅಲಿಪಿರಿ ಸೇರಿದಂತೆ ನಿಗದಿಪಡಿಸಿದ 20 ಆಯಕಟ್ಟಿನ ಸ್ಥಳಗಳಲ್ಲಿ ಭಕ್ತರ ಮುಖಗಳನ್ನು ಸ್ಕ್ಯಾನ್ ಮಾಡುತ್ತದೆ. ಅದು ದರ್ಶನದ ಕರಾರುವಕ್ ಸಮಯವನ್ನು ನಿಗದಿಪಡಿಸಲಿದ್ದು, ನಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಕೇವಲ ಒಂದು ಗಂಟೆಯೊಳಗೆ ತಿಮ್ಮಪ್ಪನ ದರ್ಶನ ಪಡೆಯಬಹುದಾಗಿದೆ ಎಂದು ನಾಯ್ದು ಅವರು ಸಂದರ್ಶನದಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್ಗೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…
T20; ವೆಸ್ಟ್ ಇಂಡೀಸ್ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ
T20I;ಡಬಲ್ ಹ್ಯಾಟ್ರಿಕ್ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
Gukesh Dommaraju; ಚದುರಂಗ ಚಾಂಪಿಯನ್ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.