Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ವೀಡಿಯೋ ಸಂದೇಶದಿಂದಾಗಿ ತಕ್ಷಣವೇ ವಿಷಯ ಅರಿತ ಸ್ನೇಹಿತರು
Team Udayavani, Dec 16, 2024, 8:38 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೊಬ್ಬ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವೇಳೆ 112 ಸಂಚಾರಿ ಪೊಲೀಸರು ವ್ಯಕ್ತಿಯ ರಕ್ಷಿಸಿ ಉಳಿಸಿದ್ದಾರೆ.
ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವಾಟ್ಸ್ಆಪ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಕೂಡಲೇ ಎಚ್ಚೆತ್ತ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ. ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ಬಿ.ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕ್ಷಿಪ್ರ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
Mundugaru:ನಕ್ಸಲ್ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ
Chikkamagaluru: ದತ್ತ ಜಯಂತಿ ಶೋಭಾಯಾತ್ರೆ ಆರಂಭ
Chikkamagaluru: ಲಾಠಿಚಾರ್ಜ್ ಬಗ್ಗೆ ಗೃಹ ಸಚಿವರಿಂದ ದಾಷ್ಟ್ಯದ ಮಾತು: ಸಿ.ಟಿ.ರವಿ ಟೀಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.