![Shipyard-Met](https://www.udayavani.com/wp-content/uploads/2024/12/Shipyard-Met-415x249.jpg)
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
Team Udayavani, Dec 16, 2024, 8:27 PM IST
![ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ](https://www.udayavani.com/wp-content/uploads/2024/12/Basavaraj-Horatti-620x413.jpg)
ಸುವರ್ಣ ವಿಧಾನಸೌಧ: ಸಭಾಪತಿ ಮತ್ತು ಸಭಾಧ್ಯಕ್ಷರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಮೊದಲೇ ಪತ್ರಿಕಾಗೋಷ್ಠಿ ಮಾಡಿದ್ದರಲ್ಲೂ ಯಾವ ಗೊಂದಲವೂ ಇಲ್ಲ. ಇದಕ್ಕೂ ಮೊದಲು ನಾವಿಬ್ಬರೂ ಮಾತನಾಡಿಕೊಂಡಿದ್ದೆವು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದರು.
ಸೋಮವಾರ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಭೋಜೇಗೌಡ ಅವರು ಸಭಾಪತಿಗಳು ಹಾಗೂ ಸಭಾಧ್ಯಕ್ಷರು ಅಧಿವೇಶನಕ್ಕೆ ಮುನ್ನ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿದ್ದರ ಬಗ್ಗೆ ಸಾಕಷ್ಟು ಗೊಂದಲಗಳಿವೆ.
ಸಾರ್ವಜನಿಕರಲ್ಲಿ ಇದರ ಬಗ್ಗೆ ಚರ್ಚೆಯಾಗುತ್ತಿದೆ. ಸಭಾಪತಿ ಮತ್ತು ಸಭಾಧ್ಯಕ್ಷರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಅಭಿಪ್ರಾಯ ಮೂಡಿದೆ. ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದರು.
ನಾನು ಡಿ.7ರಂದು ಬೆಳಗಾವಿಗೆ ಬೇರೆ ಕಾರ್ಯಕ್ರಮ ನಿಮಿತ್ತ ಬಂದಿದ್ದೆ. ಆಗ ಪರಿಷತ್‌ಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ್ದೆ. ಇಲ್ಲಿಗೆ ಬರುವ ಮುನ್ನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ಚರ್ಚೆ ಸಹ ನಡೆಸಿದ್ದೆ. ನಾವಿಬ್ಬರೂ ಮಾತನಾಡಿಕೊಂಡ ಮೇಲೆಯೇ ನಾನು ಮೊದಲೇ ಪತ್ರಿಕಾಗೋಷ್ಠಿ ಮಾಡಿದ್ದೆ. ಇದರಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
![Shipyard-Met](https://www.udayavani.com/wp-content/uploads/2024/12/Shipyard-Met-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು](https://www.udayavani.com/wp-content/uploads/2024/12/High-Court-KAR-2-150x84.jpg)
High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
![Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ](https://www.udayavani.com/wp-content/uploads/2024/12/Vidhana-Soudha-4-150x100.jpg)
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
![ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್](https://www.udayavani.com/wp-content/uploads/2024/12/Sunil-Kumar-Kar-150x96.jpg)
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
![ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/12/krishan-150x91.jpg)
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
![Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್](https://www.udayavani.com/wp-content/uploads/2024/12/Belagavi-2-150x102.jpg)
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
MUST WATCH
ಹೊಸ ಸೇರ್ಪಡೆ
![Ramesh-Kanchan1](https://www.udayavani.com/wp-content/uploads/2024/12/Ramesh-Kanchan1-150x90.jpg)
Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
![Thief](https://www.udayavani.com/wp-content/uploads/2024/12/Thief-150x106.jpg)
Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
![Shipyard-Met](https://www.udayavani.com/wp-content/uploads/2024/12/Shipyard-Met-150x90.jpg)
Malpe: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್ ನಾರ್ವೆಗೆ ಹಸ್ತಾಂತರ
![MONEY (2)](https://www.udayavani.com/wp-content/uploads/2024/12/MONEY-2-2-150x88.jpg)
Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ
![1-chagan](https://www.udayavani.com/wp-content/uploads/2024/12/1-chagan-150x95.jpg)
Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.