Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್
Team Udayavani, Dec 17, 2024, 7:20 AM IST
ಪುಂಜಾಲಕಟ್ಟೆ: ವಿವಾಹದ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಹಿನ್ನೆಲೆಯಲ್ಲಿ ಆಕೆಗೆ ನೀಡಲಾಗುತ್ತಿದ್ದ ಜೀವನಾಂಶ ರದ್ದುಗೊಳಿಸಿ ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಹೊರಡಿಸಿದ್ದ ಆದೇಶವನ್ನು ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಎತ್ತಿ ಹಿಡಿದಿದೆ.
ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್ ಮಂಗಳೂರಿನ ಅನಿತಾ ನಾಯಕ್ ಅವರನ್ನು 2018 ರಲ್ಲಿ ಮದುವೆಯಾಗಿದ್ದು, ಬಳಿಕ ದಾಂಪತ್ಯದಲ್ಲಿ ಸಮಸ್ಯೆ ತಲೆದೋರಿ ಡೈವೋರ್ಸ್ ಪಿಟಿಷನ್ ಸಲ್ಲಿಸಿದ್ದರು. ವ್ಯಾಜ್ಯವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಅನಿತಾ ಗೌಪ್ಯವಾಗಿ 2ನೇ ವಿವಾಹವಾಗಿದ್ದಾಳೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಮಧ್ಯೆ ಉದಯ ಅವರಿಂದ ಜೀವನಾಂಶ ಕೋರಿ ಪತ್ನಿ ಅನಿತಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಅನಿತಾಗೆ ಜೀವನ ನಿರ್ವಹಣೆಗಾಗಿ ನೀಡಲಾಗುತ್ತಿದ್ದ ಜೀವನಾಂಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅನಿತಾ ಬೆಂಗಳೂರಿನಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ಈ ದಾವೆಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ|ಅಶೋಕ್ ಎಸ್. ಕಿಣಗಿ ಅವರು ಅನಿತಾ ಅವರ ರಿಟ್ ಅರ್ಜಿ ವಜಾಗೊಳಿಸಿ ತೀರ್ಪು ನೀಡಿದ್ದಾರೆ. ಉದಯ ನಾಯಕ್ ಪರವಾಗಿ ವಿನೋದ್ ಶೆಟ್ಟಿ ಹಾಗೂ ರಾಜಶೇಖರ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.