Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Team Udayavani, Dec 17, 2024, 9:32 AM IST
ಸುದೀಪ್ ನಟನೆಯ “ಮ್ಯಾಕ್ಸ್’ ಚಿತ್ರ ಡಿ.25ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ರಿಲೀಸ್ ಇವೆಂಟ್ ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದ ಬಳಿ ನಡೆಯಿತು. ಈ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು.
ಇದೇ ವೇಳೆ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಲಯನ್ಸ್ ರೋರ್ ಎಂಬ ಲಿರಿಕಲ್ ವಿಡಿಯೋ ಬಿಡುಗಡೆಯಾಯಿತು.
ಈ ಚಿತ್ರವನ್ನು ಕಲೈಪುಲಿ ಎಸ್ ತನು, ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣ ಮಾಡಿದ್ದು, ವಿಜಯ್ ಕಾರ್ತಿಕೇಯ ನಿರ್ದೇಶನ ಚಿತ್ರಕ್ಕಿದೆ.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.
ನಿರ್ದೇಶಕ ವಿಜಯ್ ಕಾರ್ತಿಕೇಯ ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಎರಡೂವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ ಮ್ಯಾಕ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದ್ರೂ ಲೇಟೆಸ್ಟಾಗಿ ಬರುತ್ತೇವೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ.–ಸುದೀಪ್, ನಾಯಕ ನಟ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.