![BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ](https://www.udayavani.com/wp-content/uploads/2024/12/13-12-415x249.jpg)
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Team Udayavani, Dec 17, 2024, 9:35 AM IST
![ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ](https://www.udayavani.com/wp-content/uploads/2024/12/2-28-620x372.jpg)
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ಸರ್ಕಾರ, ಈ ಹುದ್ದೆಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಶೈಕ್ಷಣಿಕ ವಿದ್ಯಾರ್ಹತೆಯನ್ನು ಸಡಿಲಗೊಳಿಸಿದೆ’ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ವಿಚಾರವಾಗಿ ಕುಣಿಗಲ್ ತಾಲೂಕು ಅಮೃತೂರಿನ ಟಿ. ಎನ್.ರವಿಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾ ಗೀಯ ನ್ಯಾಯಪೀಠಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಸರ್ಕಾರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆದರೆ, ವಿದ್ಯಾರ್ಹತೆ ಸಡಿಲಗೊಳಿಸುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದೆ’ ಎಂದು ಆಕ್ಷೇಪಿಸಿದರು.
ರಾಜ್ಯ ಸರ್ಕಾರ 2020ರ ಜೂನ್ 19ರಂದು ಅಂತಿಮಗೊಳಿಸಿರುವ ನಿಯಮದ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಪರಿಸರ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪರಿಸರ ವಿಜ್ಞಾನ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿತ್ತು. ಇದನ್ನು ಹೈಕೋರ್ಟ್ ಕೂಡಾ ಅನುಮೋದಿಸಿದೆ. ಆದರೆ, ರಾಜ್ಯ ಸರ್ಕಾರ ಕಳೆದ ಆಗಸ್ಟ… 31 ಮತ್ತು ಸೆ.17ರಂದು ಎರಡು ಆದೇಶಗಳನ್ನು ಹೊರಡಿಸಿ ಈ ವಿದ್ಯಾರ್ಹತೆಯನ್ನುತಿದ್ದುಪಡಿ ಮಾಡಿ ಸಡಿಲಗೊಳಿಸಿದೆ’ ಎಂದರು.
ವಿದ್ಯಾರ್ಹತೆ ಸಡಿಲಗೊಳಿಸಿರುವುದು ಸುಪ್ರಿಂ ಕೋರ್ಟ್, ಹೈಕೋರ್ಟ್ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಗಳಿಗೆ ತದ್ವಿರುದ್ಧವಾಗಿದೆ. ಅಂತೆಯೇ, ಇದು ಜಲ ಮಾಲಿನ್ಯ ನಿಯಂತ್ರಣ ಮತ್ತು ತಡೆ ಕಾಯ್ದೆ-1974ರ ಸ್ಪಷ್ಟ ಉಲ್ಲಂಘ ನೆಯಾಗಿದೆ. ಆದ್ದರಿಂದ, ಸರ್ಕಾರ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಿ ಈ ಮೊದಲು ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆ ಅನ್ವಯವೇ ನೇಮಕಾತಿ ನಡೆಸುವಂತೆ ನಿರ್ದೇಶಿಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಕಾಲಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಡಿ.18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
![BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ](https://www.udayavani.com/wp-content/uploads/2024/12/13-12-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ](https://www.udayavani.com/wp-content/uploads/2024/12/8-22-150x90.jpg)
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
![Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು](https://www.udayavani.com/wp-content/uploads/2024/12/7-27-150x90.jpg)
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
![Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ](https://www.udayavani.com/wp-content/uploads/2024/12/6-30-150x90.jpg)
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
![Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ](https://www.udayavani.com/wp-content/uploads/2024/12/5-32-150x90.jpg)
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
![Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ](https://www.udayavani.com/wp-content/uploads/2024/12/6-29-150x90.jpg)
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
MUST WATCH
ಹೊಸ ಸೇರ್ಪಡೆ
![BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ](https://www.udayavani.com/wp-content/uploads/2024/12/13-12-150x90.jpg)
BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ
![6](https://www.udayavani.com/wp-content/uploads/2024/12/6-32-150x80.jpg)
Mangaluru: ಕಾಂಕ್ರೀಟ್ ರಸ್ತೆಯ ನಡುವೆ ಹಣ್ಣಿನ ಫಸಲು!
![5(1](https://www.udayavani.com/wp-content/uploads/2024/12/51-1-150x80.jpg)
Mangaluru: ಕದ್ರಿ ಹಿಲ್ಸ್ ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ
![2-](https://www.udayavani.com/wp-content/uploads/2024/12/2--150x90.jpg)
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
![4(1](https://www.udayavani.com/wp-content/uploads/2024/12/41-2-150x80.jpg)
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.