Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Team Udayavani, Dec 17, 2024, 10:21 AM IST
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಗೆ ನುಗ್ಗಿ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ತಿಲಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿ ನಾಗರಾಜ್ ಎಂಬವರ ಮನೆಯಲ್ಲಿ ಕೃತ್ಯ ನಡೆದಿದೆ. ಇವರು ತಮ್ಮ ಕುಟುಂಬದ ಜತೆ 2 ವರ್ಷಗಳಿಂದ ಜಯನಗರ 4ನೇ ಬ್ಲಾಕ್‌ನಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. ಡಿ.13ರಂದು ರಾತ್ರಿ ಬೀಗ ಹಾಕಿಕೊಂಡು ನಾಗರಾಜ್ ಮತ್ತು ಕುಟುಂಬ ಸದಸ್ಯರು ಮಂತ್ರಾಲಯಕ್ಕೆ ಹೋಗಿದ್ದರು. ಭಾನುವಾರ ರಾತ್ರಿ ವಾಪಸ್ ಬಂದಾಗ ಫ್ಲ್ಯಾಟ್‌ನ ಮುಂಬಾಗಿಲು ಮುರಿದಿರುವ ಕಳ್ಳರು, ಬೀರುವಿನಲ್ಲಿಟ್ಟಿದ್ದ 500 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು, 3 ಲಕ್ಷ ರೂ. ನಗದು ದೋಚಿ ಪರಾರಿಯಾಗಿರುವುದು ಗೊತ್ತಾಗಿದೆ.
ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ: ಆರೋಪಿಗಳು ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಗರಾಜ್‌ರ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್ 6 ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ. ನಂತರ ಅಪಾರ್ಟ್‌ಮೆಂಟ್‌ಗೆ ಹೊಸದಾಗಿ ಸೆಕ್ಯೂರಿಟಿ ಗಾರ್ಡ್ ನೇಮಿಸಿಕೊಂಡಿರಲಿಲ್ಲ. ಹೀಗಾಗಿ ದೂರುದಾರ ನಾಗರಾಜ್ ಮನೆ, ಹಣಕಾಸು ವ್ಯವಹಾರ ಮತ್ತು ಕುಟುಂಬ ಸದಸ್ಯರ ಬಗ್ಗೆ ಹಾಗೂ ಮಂತ್ರಾಲಯಕ್ಕೆ ಹೋಗಿರುವ ವಿಚಾರ ತಿಳಿದಿದ್ದ ವ್ಯಕ್ತಿಗಳೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯಗಳ ಆಧರಿಸಿ ಕಳ್ಳರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪ್ರಕರಣ ದಾಖಲಿಸಿರುವ ತಿಲಕ್‌ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.