ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Team Udayavani, Dec 17, 2024, 11:25 AM IST
ತಿರುವನಂತಪುರಂ: ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್‌ಗೆ ಸೇರಿದ ಪೊಲೀಸ್ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಅರೆಕೋಡ್ ನಲ್ಲಿ ನಡೆದಿದೆ.
ಡಿ.15 ರಂದು ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ (ಡಿ.16 ರಂದು) ಹೇಳಿದ್ದಾರೆ. ವಯನಾಡು ಮೂಲದ ವಿನೀತ್ (35) ಮೃತ ಪೊಲೀಸ್ ಕಮಾಂಡೋ.
ಏನಿದು ಘಟನೆ?: ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದಲ್ಲಿದ್ದ ವಿನೀತ್ ನಕ್ಸಲ್ ಚಟುವಟಿಕೆಯನ್ನು ನಿಯಂತ್ರಿಸುವ ಕ್ಯೂಬಿಂಗ್ ಆಪರೇಷನ್‌ನಲ್ಲಿ ನಿರತರಾಗಿದ್ದರು. ಗರ್ಭಿಣಿ ಪತ್ನಿ ಜತೆ ಸಮಯ ಕಳೆಯುವ ನಿಟ್ಟಿನಲ್ಲಿ ವಿನೀತ್ ಉನ್ನತ ಅಧಿಕಾರಿಗಳೊಂದಿಗೆ ರಜೆ ಬೇಕೆಂದು ಮನವಿ ಮಾಡಿದ್ದ. ಆದರೆ ಅಧಿಕಾರಿಗಳು ರಜೆ ನೀಡಲು ನಿರಾಕರಿಸಿದ್ದಾರೆ. ರಜೆಗಾಗಿ 45 ದಿನಗಳ ಕಾಲ ನಿರಂತರವಾಗಿ ಕೆಲಸ ಮಾಡಿದ್ದರು. ಆದರೆ ರಜೆ ಸಿಗದಿದ್ದಾಗ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ವಿನೀತ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆ ನಡೆದ ಕೂಡಲೇ ವಿನೀತ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.
ಕೆಲಸದ ಒತ್ತಡದಿಂದಾಗಿ ಕೇರಳ ಪೊಲೀಸ್ ವಿಭಾಗದಲ್ಲಿ ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲಲ್ಲ. 90 ಮಂದಿ ಪೊಲೀಸ್ ಸಿಬ್ಬಂದಿಗಳು ಇದೇ ರೀತಿಯಾಗಿ ಕೆಲಸದ ಒತ್ತಡದಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.