Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Team Udayavani, Dec 17, 2024, 9:34 PM IST

7-udupi

ಉಡುಪಿ: ದೇಶದ ಸಾಂಪ್ರದಾಯಿಕ ಕಸುಬುದಾರರಿಗೆ ಅನುಕೂಲಕ್ಕಾಗಿ ತಂದ ವಿಶ್ವಕರ್ಮ ಯೋಜನೆಗೆ ಕರ್ನಾಟಕದಲ್ಲಿ 11 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಸಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಹೆಚ್ಚು ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ.

ಈಗಾಗಲೇ 7 ಸಾವಿರಕ್ಕೂ ಅಧಿಕ ಫಲಾನುಭವಿಗಳು ತರಬೇತಿ ಪಡೆದಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ವಿಶ್ವಕರ್ಮ ಯೋಜನೆಯ ಕರಕುಶಲ ಕರ್ಮಿಗಳಿಗೆ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡುವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿ ಚರ್ಚಿಸಿದರು.

ವಿಶ್ವಕರ್ಮ ಯೋಜನೆಗೆ ಕೆಲ ರಾಷ್ಟ್ರೀಕೃತ ಬ್ಯಾಂಕ್ ಗಳು ಮಾತ್ರ ಉತ್ತಮವಾಗಿ ಸ್ಪಂದಿಸುತ್ತಿದ್ದು, ಇತರ ಕೆಲ ಬ್ಯಾಂಕಿನ ಬ್ರಾಂಚ್ ಗಳಲ್ಲಿ ನಿಗದಿತ 250 ರೂ.ಗಿಂತ ಹೆಚ್ಚು ಮೊತ್ತದ ಅಫಿಡವಿತ್ ಕೇಳುವುದು, ಕೋವಿಡ್ ಸಂಕಷ್ಟ ಕಾಲದಲ್ಲಿ ತೆಗೆದು ಸಾಲ ಪಾವತಿ ಮಾಡಿದ್ದರೂ ಸಿಬಲ್ ಉಲ್ಲೇಖ ಮಾಡಿ ಸಾಲ ನಿರಾಕರಿಸುವುದು, ಕೆಲವೆಡೆ ಜಿ.ಎಸ್.ಟಿ. ಬಿಲ್ಲುಗಳನ್ನು ಕೇಳುತ್ತಾ ಇರುವುದರಿಂದ ವಿಶ್ವಕರ್ಮ ಕುಲ ಕಸುಬುದಾರರು ಸಾಲಕ್ಕಾಗಿ ಕಾಯುತ್ತಿದ್ದಾರೆ.

ಈ ಹಿನ್ನೆಲೆ ಬ್ಯಾಂಕ್ ಗಳಿಗೆ ವಿಳಂಬವಿಲ್ಲದೆ ಕೇಂದ್ರ ಸರಕಾರದ ಭದ್ರತೆ ಹೊಂದಿರುವ ವಿಶ್ವಕರ್ಮ ಯೋಜನೆಯ ಅರ್ಜಿದಾರರಿಗೆ ಸಾಲ ನೀಡುವಂತೆ ನಿರ್ದೇಶನ ನೀಡಬೇಕೆಂದು ಸಂಸದ ಕೋಟ ಮನವಿ ಮಾಡಿದರು.

ಮನವಿಯನ್ನು ಆಲಿಸಿದ ಕೇಂದ್ರ ಹಣಕಾಸು ಸಚಿವೆ ತಕ್ಷಣ ಕ್ರಮ ಜರುಗಿಸಿ ಸಾಲ ಸೌಲಭ್ಯ ನೀಡಲು ಆದೇಶಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

4

Udupi: ಹಾವು ಕಡಿದು ಕೃಷಿಕ ಸಾವು

Malpe-Goods

Malpe: ತಂತಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌; ಹೊತ್ತಿ ಉರಿದ ಗೂಡ್ಸ್‌ ವಾಹನ

missing

Udupi: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Bajpe-Crane

Bajpe: ಕಮರಿಗೆ ಬಿದ್ದ ಕ್ರೇನ್‌; ಅದರಡಿ ಸಿಲುಕಿದ ಆಪರೇಟರ್‌ಗೆ ಗಂಭೀರ ಗಾಯ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Bajpe-Arrest

Bajpe: ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಕಳ್ಳನ ಬಂಧನ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.