Bajpe: ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಕಳ್ಳನ ಬಂಧನ
Team Udayavani, Dec 18, 2024, 2:25 AM IST
ಬಜಪೆ: ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿ ಬಜಪೆ ಪೊಲೀಸರು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30)ನನ್ನು ಬಂಧಿಸಿದ್ದಾರೆ.
ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ವಿಶೇಷ ತಂಡ ರಚಿಸಿದ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್. ಅವರು ಆರೋಪಿಯನ್ನು ಪತ್ತೆ ಮಾಡಿದ್ದು, ಆರೋಪಿತನಿಂದ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಸರ, 50 ಸಾವಿರ ರೂಪಾಯಿ ಮೌಲ್ಯದ ಸ್ಕೂಟರ್, ಸುಮಾರು 50 ಸಾವಿರ ರೂಪಾಯಿ ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿತನ ವಿರುದ್ಧ ಮೂಡುಬಿದಿರೆ, ಮೂಲ್ಕಿ, ಬಜಪೆ, ಉಪ್ಪಿನಂಗಡಿ ಪೊಲೀಸ್ ಠಾಣೆ ಮತ್ತು ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂ ಧಿಸಿದ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳಲ್ಲಿ ಆರೋಪಿತ 2 ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದುಕೊಂಡಿದ್ದ. ಸರ ಮಾರಾಟದ ಹಣದಿಂದ ಆತ ಆಟೋ ರಿಕ್ಷಾ ಖರೀದಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.