Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

ಶಾಲಾ ವಾಹನ ಅತ್ಯಧಿಕ ಸಂಚಾರ: ವಿದ್ಯಾರ್ಥಿಗಳಿಗೆ ಎದುರಾಗಿದೆ ಆತಂಕ

Team Udayavani, Dec 18, 2024, 1:28 PM IST

6

ನೀರುಮಾರ್ಗ: ನೀರುಮಾರ್ಗ ಗ್ರಾ.ಪಂ. ವ್ಯಾಪ್ತಿಯ ಕೆಲರೈಯಿಂದ ವಾಮಂಜೂರು ಸಂಪರ್ಕಿಸುವ ರಸ್ತೆ ಕಳೆದ ಹತ್ತಾರು ವರ್ಷಗಳಿಂದ ಅಭಿವೃದ್ಧಿಗೊಂಡಿಲ್ಲ. ಶಾಲಾ ವಾಹನಗಳೇ ಅತ್ಯಧಿಕವಾಗಿ ಓಡಾಡುವ ರಸ್ತೆ ಇದಾಗಿದ್ದು, ಮಕ್ಕಳಿಗೆ ಜೀವಭಯ ಎದುರಾಗಿದೆ. ಕೆಲವು ದಿನಗಳ ಹಿಂದೆ ಶಾಲಾ ವಾಹನವೊಂದು ಕೋದಳೆಲೆ ಅಂತರದಲ್ಲಿ ಅಪಾಯದಿಂದ ಪಾರಾಗಿತ್ತು. ಆ ಬಳಿಕ ಪೋಷಕರ ಆತಂಕ ಮತ್ತಷ್ಟು ಹೆಚ್ಚಾಗಿದೆ.

ನೀರುಮಾರ್ಗ, ಮೇರ್ಲಪದವು, ಅಡ್ಯಾರ್‌ಪದವು ಬೊಂಡಂತಿಲ, ತಿರುವೈಲು ಗ್ರಾಮದ ಸಾವಿರಾರು ಜನರಿಗೆ ಹಾಗೂ ಶಾಲಾ ವಾಹನಗಳಿಗೆ ವಾಮಂಜೂರು ತಲುಪಲು ಇರುವ ಅತೀ ಹತ್ತರದ ರಸ್ತೆ ಇದಾಗಿದೆ. ನಿತ್ಯ ಸಾವಿರಾರು ಮಂದಿ ಈ ರಸ್ತೆಯನ್ನು ಬಳಸುತ್ತಿದ್ದಾರೆ. ಸುಮಾರು 2 ಕಿ.ಮೀ. ನಷ್ಟು ಇರುವ ರಸ್ತೆ ಹೊಂಡ ಗುಂಡಿಗಳಿಂದ ತುಂಬಿಕೊಂಡಿದೆ.

10 ವರ್ಷಗಳಿಂದ ಅಭಿವೃದ್ಧಿಯಾಗಿಲ್ಲ
ಕಳೆದ ಸರಿಸುಮಾರು 10 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿಗೊಂಡಿಲ್ಲ. ಈ ಕಾರಣದಿಂದಾಗಿ ರಸ್ತೆಯುದ್ದಕ್ಕೂ ಹೊಂಡ ಗುಂಡಿಗಳಿಂದ ಕೂಡಿದೆ. ಕೆಲವು ವರ್ಷದ ಹಿಂದೆ ಅಳವಡಿಸಿದ್ದ ಕಾಂಕ್ರೀಟ್‌ ಸಮರ್ಪಕವಾಗಿ ಕಾಮಗಾರಿ ನಡೆಸದ ಕಾರಣ ತೆರವುಗೊಳಿಸಲಾಗಿದೆ. ಆ ಪ್ರದೇಶದಲ್ಲಿ ರಸ್ತೆಯಲ್ಲಿ ಜಲ್ಲಿಕಲ್ಲುಗಳು ಹರಡಿಕೊಂಡಿದ್ದು, ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ.

ಶಾಲಾ ವಾಹನಗಳ ಓಡಾಟ; ಅಪಾಯಕ್ಕೆ ಆಹ್ವಾನ
ಈ ಮಾರ್ಗದಲ್ಲಿ ಸ್ಥಳೀಯ ಖಾಸಗಿ ಶಾಲೆಗಳು ಹಾಗೂ ಇತರ ಶಾಲೆಗಳ ಹತ್ತಾರು ಶಾಲಾ ಬಸ್‌ಗಳು ನಿತ್ಯ ಓಡಾಡುತ್ತವೆ. ಮಕ್ಕಳನ್ನು ತುಂಬಿಸಿಕೊಂಡು ರಿಕ್ಷಾಗಳು, ಕಾರು, ದ್ವಿಚಕ್ರ ವಾಹನಗಳು ಈ ರಸ್ತೆಯಲ್ಲಿ ಓಡಾಡುತ್ತವೆ. ಲಾರಿ, ಗೂಡ್ಸ್‌ ವಾಹನಗಳು ಕೂಡ ಈ ರಸ್ತೆಯನ್ನು ಬಳಸುತ್ತಿವೆ. ಏರಿಳಿತ ಇರುವ ರಸ್ತೆಯಲ್ಲಿ ಏಕಮುಖ ಸಂಚಾರವೇ ಕಷ್ಟವಾಗುತ್ತಿದ್ದು, ಇಲ್ಲಿ ವಾಹನಗಳು ಎದುರುಬದುರಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮತ್ತೆ ಹಳೆಯ ರಾಗ
ಕಳೆದ ವರ್ಷ ಗ್ರಾಮ ಪಂಚಾಯತ್‌ ಮೀಟಿಂಗ್‌ನಲ್ಲಿ ಈ ವಿಚಾರ ಪ್ರಸ್ತಾವಿಸಿ ದುರಸ್ತಿಗೆ ಮನವಿ ನೀಡಲಾಗಿತ್ತು. ಆ ಸಂದರ್ಭ ರಸ್ತೆಗೆ ಬೇಕಾದಷ್ಟು ಅನುದಾನ ಗ್ರಾ.ಪಂ. ಬಳಿ ಇಲ್ಲ ಎಂದು ಉತ್ತರಿಸಿದ್ದರು. ಈ ವರ್ಷವೂ ಅರ್ಜಿ ನೀಡಲಾಗಿದ್ದು, ಮತ್ತೆ ಹಳೆಯ ರಾಗವನ್ನೇ ಹೇಳುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಅನುದಾನದ ಕೊರತೆ ಇದೆ
ಗ್ರಾಮ ಪಂಚಾಯತ್‌ನಲ್ಲಿ ಈ ಕಾಮಗಾರಿ ನಡೆಸಲು ಅನುದಾನದ ಕೊರತೆ ಇದೆ. ದೊಡ್ಡ ಮೊತ್ತದ ಅನುದಾನ ಬೇಕಾಗುತ್ತದೆ. ಶಾಸಕರ ನಿಧಿಯಿಂದ ಅನುದಾನ ಒದಗಿಸಲು ಮನವಿ ಸಲ್ಲಿಸಲಾಗಿದೆ. ಸಣ್ಣಪುಟ್ಟ ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಬಹುದು.
-ಶ್ರೀಧರ್‌, ನೀರುಮಾರ್ಗ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.