OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
ಸ್ಪೀಕರ್ ಓಂ ಬಿರ್ಲಾ ಅವರು 48 ಗಂಟೆಯೊಳಗೆ ಜೆಪಿಸಿ ಸದಸ್ಯರ ಹೆಸರನ್ನು ಅಂತಿಮಗೊಳಿಸಬೇಕಿದೆ
ನಾಗೇಂದ್ರ ತ್ರಾಸಿ, Dec 18, 2024, 2:45 PM IST
ಆರ್ಥಿಕ ವೆಚ್ಚ ಕಡಿತಗೊಳಿಸುವ ಮತ್ತು ಪದೇ, ಪದೇ ಎದುರಾಗುವ ಚುನಾವಣೆಯಿಂದ ಸರಕಾರದ ನೀತಿ-ನಿಯಮಗಳಿಗೆ ಅಡ್ಡಿಯಾಗುವ ಆತಂಕ ನಿವಾರಿಸುವ ನಿಟ್ಟಿನಲ್ಲಿ ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಯೋಜನೆ ಕಾರ್ಯಗತಗೊಳಿಸಬೇಕೆಂಬ ದೀರ್ಘಕಾಲದ ಚಿಂತನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ವಿಧೇಯಕ 2024 ಹಾಗೂ ಸಾಮಾನ್ಯ ವಿಧೇಯಕವನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದ್ದರು.
ಎರಡನೇ ಮಸೂದೆಯು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ ಹಾಗೂ ರಾಷ್ಟ್ರರಾಜಧಾನಿ ದೆಹಲಿ ಆಡಳಿತದ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಬದಲಾವಣೆಯ ಮುಖ್ಯ ಗುರಿ ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಯುವ ಸಂದರ್ಭದಲ್ಲೇ ಕೇಂದ್ರಾಡಳಿತ, ದೆಹಲಿಯಲ್ಲೂ ಚುನಾವಣೆ ನಡೆಸುವ ಉದ್ದೇಶ ಹೊಂದಿದೆ.
ಒಂದು ದೇಶ, ಒಂದು ಚುನಾವಣೆ ಜಾರಿಗೊಳಿಸುವುದಾಗಿ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಅದರಂತೆ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ. ಮತ್ತೊಂದೆಡೆ ವಿಧೇಯಕ ಹಾಗೂ ಇದರ ಅನುಷ್ಠಾನದ ಕುರಿತು ಜಂಟಿ ಸಂಸದೀಯ ಸಮಿತಿ (JPC) ರಚಿಸಬೇಕಾಗಿದೆ. ಒಂದು ದೇಶ, ಒಂದು ಚುನಾವಣೆ ಜಾರಿ ಕುರಿತು ಜೆಪಿಸಿ ಹೊಣೆಗಾರಿಕೆ ಏನು, ಯಾರನ್ನು ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬಿತ್ಯಾದಿ ವಿಚಾರಗಳ ವಿಮರ್ಶೆ ಇಲ್ಲಿದೆ…
31 ಸದಸ್ಯರ ಜೆಪಿಸಿ :
ಲೋಕಸಭೆ ಹಾಗೂ ರಾಜ್ಯಸಭೆ ಸೇರಿದಂತೆ ಗರಿಷ್ಠ 31 ಸದಸ್ಯರನ್ನೊಳಗೊಂಡಂತೆ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲಾಗುತ್ತದೆ. ಇದರಲ್ಲಿ ಲೋಕಸಭೆಯ 21 ಮಂದಿ ಸದಸ್ಯರು ಇರಲಿದ್ದಾರೆ. ಈ ಸಮಿತಿ ಪ್ರಸ್ತಾವಿತ ತಿದ್ದುಪಡಿಯನ್ನು ಪರಿಶೀಲಿಸಲಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು 48 ಗಂಟೆಯೊಳಗೆ ಜೆಪಿಸಿ ಸದಸ್ಯರ ಹೆಸರನ್ನು ಅಂತಿಮಗೊಳಿಸಬೇಕಿದೆ. ಶುಕ್ರವಾರ ಚಳಿಗಾಲದ ಅಧಿವೇಶನ ಮುಗಿಯಲಿದ್ದು, ಈ ಸಮಯದೊಳಗೆ ಜೆಪಿಸಿ ಸದಸ್ಯರ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಬೇಕಾಗಿದೆ. ಒಂದು ವೇಳೆ ಈ ಅಧಿವೇಶನದೊಳಗೆ ಜೆಪಿಸಿ ರಚನೆ ಆಗದಿದ್ದರೆ, ಒಂದು ದೇಶ, ಒಂದು ಚುನಾವಣೆ ಮಸೂದೆ ರದ್ದಾಗಲಿದ್ದು, ಮುಂದಿನ ಅಧಿವೇಶನದಲ್ಲಿ ಮರು ಮಂಡನೆಯಾಗಬೇಕು.
ಸದಸ್ಯರ ಆಯ್ಕೆಗಾಗಿ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ. ಆದರೆ ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವೇ ಅತೀ ದೊಡ್ಡ ಪಕ್ಷವಾಗಿರುವುದರಿಂದ ಜೆಪಿಸಿ ಅಧ್ಯಕ್ಷ ಸ್ಥಾನ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ.
ಅಧ್ಯಯನಕ್ಕಾಗಿ ಜೆಪಿಸಿಗೆ 90 ದಿನಗಳ ಕಾಲಾವಕಾಶ:
ಜಂಟಿ ಸಂಸದೀಯ ಸಮಿತಿ (JPC) ರಚನೆಯಾದ ನಂತರ ವಿವರವಾದ ವರದಿಯನ್ನು ಒಪ್ಪಿಸಲು 90 ದಿನಗಳ ಕಾಲಾವಧಿ ನಿಗದಿಪಡಿಸಲಾಗುತ್ತದೆ. ಒಂದು ವೇಳೆ ಅಗತ್ಯವಿದ್ದರೆ ಕಾಲಾವಧಿಯನ್ನು ವಿಸ್ತರಿಸಬಹುದಾಗಿದೆ.
ಈ ಅವಧಿಯಲ್ಲಿ ಜೆಪಿಸಿ, ಸಮಿತಿಯಲ್ಲಿದ್ದ ಸದಸ್ಯರನ್ನು ಹೊರತುಪಡಿಸಿ ಸಂಸದರು, ಸಂವಿಧಾನ ತಜ್ಞರು, ನಿವೃತ್ತ ನ್ಯಾಯಾಧೀಶರು, ವಕೀಲರು, ಚುನಾವಣಾ ಆಯೋಗದ ನಿವೃತ್ತ ಸದಸ್ಯರು, ರಾಜ್ಯ ವಿಧಾನಸಭೆಯ ಸ್ಪೀಕರ್, ಸಾರ್ವಜನಿಕರು ಸೇರಿದಂತೆ ವಿವಿಧ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ ಸಲಹೆ-ಸೂಚನೆಯನ್ನು ಪಡೆಯಲಿದೆ.
ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಕ್ರೋಢಿಕರಿಸಿದ ನಂತರ ಸಮಿತಿ ತನ್ನ ಶಿಫಾರಸ್ಸನ್ನು ಅಂತಿಮಗೊಳಿಸುವ ಮೊದಲು ಪ್ರಸ್ತಾವಿತ ತಿದ್ದುಪಡಿಯನ್ನು ಹಂತ, ಹಂತವಾಗಿ ಪರಿಶೀಲಿಸಿ, ಅಧ್ಯಯನ ನಡೆಸಲಿದೆ.
ಒಂದು ದೇಶ, ಒಂದು ಚುನಾವಣೆ ಜಾರಿಯಾದಲ್ಲಿ, ದೇಶಾದ್ಯಂತ ಏಕಕಾಲದಲ್ಲಿ ಲೋಕಸಭಾ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮೂಲಕ ದೀರ್ಘ ಚುನಾವಣ ಪ್ರಕ್ರಿಯೆಗೆ ಕಡಿವಾಣ ಬೀಳಲಿದೆ. ಪ್ರಸ್ತುತ 2024ರಲ್ಲಿ ಲೋಕಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗೆ ಚುನಾವಣೆ ನಡೆದಿತ್ತು. 2023ರಲ್ಲಿ ಕರ್ನಾಟಕ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆ ನಡೆದಿದ್ದು, 2025ರಲ್ಲಿ ದೆಹಲಿ ಮತ್ತು ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. 2026ರಲ್ಲಿ ತಮಿಳುನಾಡು ಹಾಗೂ ಪಶ್ಚಿಮಬಂಗಾಳ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಪ್ರಕ್ರಿಯೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
SM Krishna: ಪ್ರೊಫೆಸರ್ ಟು ಸಿಎಂ, ಗವರ್ನರ್, ವಿದೇಶಾಂಗ ಸಚಿವ…SMK ರಾಜಕೀಯ ಯಶೋಗಾಥೆ…
Exclusive: ಭಾರತ-ಮ್ಯಾನ್ಮಾರ್ ಗಡಿ; ಮೋದಿ ಸರ್ಕಾರದ Fence ನಿರ್ಮಾಣ ಯೋಜನೆಗೆ ವಿರೋಧವೇಕೆ!
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.