GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Team Udayavani, Dec 19, 2024, 7:20 AM IST
ಹೊಸದಿಲ್ಲಿ: ಆನ್‌ಲೈನ್ ಆಹಾರ ವಿತರಣೆ ತಾಣಗಳಾದ ಜೊಮ್ಯಾಟೊ, ಸ್ವಿಗ್ಗಿಗಳಿಗೆ ಸಂಭ್ರಮದ ಸುದ್ದಿ ಸಿಕ್ಕಿದೆ. ಮೂಲಗಳ ಪ್ರಕಾರ ಈ ತಾಣಗಳ ಆಹಾರ ವಿತರಣೆ ಮೇಲಿನ ಜಿಎಸ್‌ಟಿಯನ್ನು ಶೇ.5 ಇಳಿಸಲಾಗುತ್ತದೆ. ಪ್ರಸ್ತುತ ಶೇ.18 ಜಿಎಸ್‌ಟಿಯನ್ನು ಜೊಮ್ಯಾಟೊ, ಸ್ವಿಗ್ಗಿ ಪಾವತಿಸುತ್ತವೆ. ಡಿ.21ರಂದು ರಾಜ ಸ್ಥಾನದ ಜೈಸಲ್ಮೇರ್‌ನಲ್ಲಿ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. ಈ ನೀತಿ 2022ರ ಜ.1ರಿಂದಲೇ ಪೂರ್ವಾನ್ವಯ ವಾಗುತ್ತದೆ.
ಕೇಂದ್ರ ಸರಕಾರ ತೆರಿಗೆ ಕಡಿತ ಮಾಡಬೇಕೆಂದು ಆನ್‌ಲೈನ್ ತಾಣಗಳು ಬಹಳ ಸಮಯದಿಂದ ಆಗ್ರಹಿಸುತ್ತಿದ್ದವು. ಅದಕ್ಕೆ ಷರತ್ತುಬದ್ಧ ಅನುಮೋದನೆ ಸಿಗುವ ಸಾಧ್ಯತೆಯಿದೆ. ಅರ್ಥಾತ್ ಈ ತಾಣಗಳಿನ್ನು ಸರಕಾರಕ್ಕೆ ತೆರಿಗೆ ಪಾವತಿಸುವಾಗ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ವಿನಾಯಿತಿಯನ್ನು ಕೇಳುವಂತಿಲ್ಲ. ಅಂದರೆ ತಾವು ಖರೀದಿ ಮಾಡಿದ ಆಹಾರ ಪದಾರ್ಥಗಳಿಗೆ ತಾವು ಪಾವತಿಸಿದ ಜಿಎಸ್‌ಟಿ ಮೇಲೆ ವಿನಾಯಿತಿ ಪಡೆಯುತ್ತಿದ್ದವು. ಇನ್ನು ಜಿಎಸ್‌ಟಿ ತೆರಿಗೆಗೆ ಅರ್ಜಿ ಸಲ್ಲಿಸುವಾಗ ಈ ವಿನಾಯ್ತಿ ಕೇಳುವಂತಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.