Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Team Udayavani, Dec 19, 2024, 8:00 AM IST
ಹೊಸದಿಲ್ಲಿ: ಬ್ಯಾಂಕ್ಗಳಿಗೆ ವಂಚಿಸಿ ದೇಶ ಬಿಟ್ಟು ಹೋಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತಿತರರಿಂದ ಒಟ್ಟಾರೆ 22,280 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿ, ಬ್ಯಾಂಕ್ಗಳಿಗೆ ಹಾಗೂ ಹಕ್ಕುದಾರರಿಗೆ ಹಸ್ತಾಂತರಿಸಲಾಗಿದೆ. ವಂಚನೆ ಮಾಡಿದ ಯಾರನ್ನೂ ನಾವು ಸುಮ್ಮನೆ ಬಿಟ್ಟಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಪೂರಕ ಅಂದಾಜುಗಳ ಮೇಲಿನ ಚರ್ಚೆ ವೇಳೆ ಈ ಮಾಹಿತಿ ನೀಡಿದ ಅವರು, ವಿಜಯ್ ಮಲ್ಯಗೆ ಸೇರಿದ 14,131.6 ಕೋಟಿ ರೂ. ಆಸ್ತಿಯನ್ನು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳಿಗೆ ಹಿಂದಿರುಗಿಸಲಾಗಿದೆ. ನೀರವ್ ಮೋದಿಗೆ ಸೇರಿದ 1,052.58 ಕೋಟಿ ರೂ. ಆಸ್ತಿಯನ್ನು ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಇತರ ಖಾಸಗಿ ಬ್ಯಾಂಕ್ಗಳಿಗೆ ಹಿಂದಿರುಗಿಸಲಾಗಿದೆ. ಮೆಹುಲ್ ಚೋಕ್ಸಿ ಪ್ರಕರಣದಲ್ಲಿ 2,562.90 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದು, ಸದ್ಯದಲ್ಲೇ ಹರಾಜು ಹಾಕಲಾಗುವುದು ಎಂದು ವಿವರಿಸಿದರು. ಜತೆಗೆ, ನ್ಯಾಶ ನಲ್ ಸ್ಪಾಟ್ ಎಕ್ಸ್ಚೇಂಜ್ ಲಿಮಿಟೆಡ್ ಪ್ರಕರಣದಲ್ಲಿ ವಂಚನೆಗೆ ಒಳಗಾದ ನೈಜ ಹೂಡಿಕೆದಾರರಿಗೆ 17.47 ಕೋಟಿ ರೂ. ವಾಪಸ್ ಮಾಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.