Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ
ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಭಿಯಂತರು, ಗುತ್ತಿಗೆದಾರರಿಗೆ ಡಾ.ಕೆ.ವಿದ್ಯಾಕುಮಾರಿ ಸೂಚನೆ
Team Udayavani, Dec 19, 2024, 2:09 AM IST
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಜ.10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಪತ್ರ ವ್ಯವಹಾರಗಳು ನಡೆದಿದ್ದವು. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದಿರುವುದರಿಂದ ಆಗುತ್ತಿರುವ ತೊಂದರೆ ಬಗ್ಗೆ ಸಾರ್ವಜನಿಕರಿಂದ ಪ್ರತಿದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ. ವಾರಕ್ಕೊಮ್ಮೆ ಕಾಮಗಾರಿಯ ಮಾಹಿತಿ ನೀಡುವಂತೆ ಡಿಸಿ ಸೂಚಿಸಿದರು.
ರೈಲ್ವೇ ಇಲಾಖೆ ಅನುಮತಿ
ಕಾಮಗಾರಿ ಕೈಗೊಳ್ಳಲು ರೈಲ್ವೇ ಇಲಾಖೆ ಅನುಮತಿ ನೀಡಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಿಯಲ್ಲಿ ಮಾಡಬೇಕು. ಜ.7ರ ಒಳಗೆ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಕೊಂಕಣ ರೈಲ್ವೇಯ ಸೀನಿಯರ್ ಎಂಜಿನಿಯರ್ ಗೋಪಾಲಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾ.ಹೆ.ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.