Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Team Udayavani, Dec 19, 2024, 10:17 AM IST
ಹೈದರಾಬಾದ್: ಬಳಗಂ ಚಿತ್ರದ ಮೂಲಕ ಜನಮನ್ನಣೆ ಗಳಿಸಿದ್ದ ಪದ್ಮಶ್ರೀ ಪುರಸ್ಕೃತ ಜನಪದ ಕಲಾವಿದ ದರ್ಶನಂ ಮೊಗಿಲಯ್ಯ (67) ಗುರುವಾರ(ಡಿ.೧೮) ಬೆಳಗ್ಗೆ ನಿಧನರಾಗಿದ್ದಾರೆ.
ಕಿನ್ನೇರ ಮೊಗಿಲಯ್ಯ ಎಂದೂ ಕರೆಯಲ್ಪಡುವ ಮೊಗಿಲಯ್ಯ ಅವರು ಮೂತ್ರಪಿಂಡ ಕಾಯಿಲೆಯಿಂದ ವಾರಂಗಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಮೊಗಿಲಯ್ಯ ಅವರು ಬುಡಕಟ್ಟು ಸಂಗೀತ ವಾದ್ಯಗಾರರಲ್ಲಿ ಒಬ್ಬರು. ಸಂಗೀತ ಪರಿಕರಗಳಲ್ಲಿಯೇ ಅಪರೂಪವಾದ ‘ಕಿನ್ನೆರ’ಕ್ಕೆ ಮರುಜೀವ ಕೊಟ್ಟವರೇ ಮೊಗಿಲಯ್ಯನವರು. ಅಲ್ಲದೆ ಇದಕ್ಕೆ ರಾಷ್ಟ್ರೀಯ ಸ್ಥಾನಮಾನ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದರಿಂದಾಗಿ ಮೊಗಿಲಯ್ಯ ಅವರಿಗೆ ಕಿನ್ನೆರ ಮೊಗಿಲಯ್ಯ ಎಂದೇ ಖ್ಯಾತರಾಗಿದ್ದರು. ಇದಾದ ಬಳಿಕ 2022 ರಲ್ಲಿ ಮೊಗಿಲಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತೆಲಂಗಾಣದ ಹಳ್ಳಿಯ ಜನರ ಬದುಕಿನ ಹಿನ್ನೆಲೆಯನ್ನು ಇಟ್ಟುಕೊಂಡು ಬಿಡುಗಡೆಯಾದ ಬಲಗಂ ಚಿತ್ರ ಅಬ್ಬರದ ಯಶಸ್ಸು ಕಂಡಿದ್ದು ಗೊತ್ತೇ ಇದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಭಾವನಾತ್ಮಕ ಗೀತೆಯೊಂದನ್ನು ಹಾಡುವ ಮೂಲಕ ಮೊಗಿಲಯ್ಯ ಪ್ರೇಕ್ಷಕರ ಮನ ಮುಟ್ಟಿದ್ದಾರೆ. ಈ ಚಿತ್ರದ ಮೂಲಕ ರಾಜ್ಯಾದ್ಯಂತ ಜನಮನ್ನಣೆಯನ್ನೂ ಗಳಿಸಿದರು.
ಮೊಗಿಲಯ್ಯ ನಿಧನಕ್ಕೆ ಚಿತ್ರತಂಡ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ, ಇಂದು ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.