BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Team Udayavani, Dec 19, 2024, 11:02 AM IST
ಬೆಂಗಳೂರು: ಲೈಂಗಿಕ ಕಿರುಕುಳ ನೀಡಿರುವುದನ್ನು ಯಡಿಯೂರಪ್ಪ ಒಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿರುವ ಸ್ವಇಚ್ಛಾ ಹೇಳಿಕೆಯಲ್ಲಿ ದಾಖಲಿಸಿದ್ದಾಳೆ.
ಅದರಂತೆ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳವೆಸಗಿರುವ ಕೃತ್ಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಖುದ್ದಾಗಿ ಒಪ್ಪಿ ಕೊಂಡಿದ್ದಾರೆ. ಸಂತ್ರಸ್ತೆ ಈ ಹೇಳಿಕೆಯೊಂದೇ ಸಾಕು, ಯಡಿಯೂರಪ್ಪ ಅವರನ್ನು ತಪ್ಪಿತಸ್ಥ ಎಂದು ತೀರ್ಮಾನಿಸಲು’ ಎಂದು ಹೈಕೋರ್ಟ್ಗೆ ಸಿಐಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಹೈಕೋರ್ಟ್ ಮುಂದೆ ವಾದಿಸಿದ್ದಾರೆ.
ಪೋಕ್ಸೋ ವಿಶೇಷ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ನ್ಯಾ. ಎಂ.ನಾಗಪ್ರಸನ್ನ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಎಸ್ಪಿಪಿ ರವಿವರ್ಮ ಕುಮಾರ್ ವಾದ ಮಂಡಿಸಿ, ಸಂತ್ರಸ್ತೆ ದಾಖಲಿಸಿರುವ ಸ್ವಯಿಚ್ಛೆ ಹೇಳಿಕೆ ಓದಿ, ಸಂತ್ರಸ್ತೆಯ ಈ ಹೇಳಿಕೆ ಸಾಕು ಯಡಿಯೂರಪ್ಪರನ್ನು ತಪ್ಪಿತಸ್ಥ ಎಂದು ತೀಮಾರ್ನಿ ಸಲು. ಈ ಕುರಿತು ಸಂತ್ರಸ್ತೆ ಬಳಿ ವಿಡಿಯೋ ತುಣುಕುಗಳಿವೆ ಎಂದರು.
ದಿನದ ಕಾಲಾಪ ಮುಗಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಗುರುವಾರ ಸಂಜೆ 5 ಗಂಟೆಗೆ ನ್ಯಾಯಪೀಠ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.