Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Team Udayavani, Dec 19, 2024, 11:04 AM IST

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

ಬೆಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 83 ವರ್ಷದ ವೃದ್ಧೆಯೊಬ್ಬರಿಗೆ ಕರೆ ಮಾಡಿದ ಸೈಬರ್‌ ಕಳ್ಳರು ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ ಬರೋಬ್ಬರಿ 1.24 ಕೋಟಿ ರೂ. ವಂಚಿಸಿದ್ದಾರೆ. ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚಕರಿಗೆ ಖಾಕಿ ಬಲೆ ಬೀಸಿದೆ.

ಮಲ್ಲೇಶ್ವರದ ನಿವಾಸಿ ವಸಂತ ಕೋಕಿಲಮ್‌ (83) ವಂಚನೆಗೊಳಗಾದವರು.

ಅ.15ರಂದು ಬೆಳಗ್ಗೆ 10.30ರ ಸುಮಾರಿಗೆ ವೃದ್ದೆ ವಸಂತ ಕೋಕೊಲಮ್‌ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮುಂಬೈ ಪೊಲೀಸ್‌ ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದರು. ನಿಮ್ಮ ಹೆಸರಿನಲ್ಲಿ ಮತ್ತೊಂದು ಫೋನ್‌ ನಂಬರ್‌ ಇದ್ದು, ಆ ನಂಬರ್‌ ಕಾನೂನು ಬಾಹಿರ ಚಟುವಟಿಕೆಗಳಿಗೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಬಳಕೆಯಾಗುತ್ತಿದೆ ಎಂದು ನಂಬಿಸಿದ್ದರು. ಇದನ್ನು ಕೇಳಿ ಭಯಭೀತರಾದ ವೃದ್ಧೆ ಏನು ಮಾಡಬೇಕೆಂದು ತೋಚದೇ ತಮಗೇನು ಗೊತ್ತಿಲ್ಲ ಎಂದು ಹೇಳಿದ್ದರು. ಇಷ್ಟಕ್ಕೆ ಸುಮ್ಮನಾಗದ ಸೈಬರ್‌ ವಂಚಕರು, ನಮ್ಮ ಹಿರಿಯ ಅಧಿಕಾರಿಗಳು ಫೋನ್‌ ಮಾಡುತ್ತಾರೆಂದು ತಿಳಿಸಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಅಪರಿಚಿತರು ವೃದ್ಧೆ ವಸಂತ ಅವರಿಗೆ ವಾಟ್ಸ್‌ಆ್ಯಪ್‌ ಕರೆ ಮಾಡಿ ಸಿಬಿಐ ಅಧಿಕಾರಿಗಳೆಂದು ತಮ್ಮನ್ನು ಪರಿಚಯಿಸಿಕೊಂಡಿದ್ದರು.

1.24 ಕೋಟಿ ರೂ. ವಂಚನೆ: ನೀವು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಭಾಗಿಯಾಗಿದ್ದೀರಾ, ನಿಮ್ಮ ಮೇಲೆ ಎಫ್ಐಆರ್‌ ದಾಖಲಾಗಿದೆ ಎಂದು ವಸಂತ ಅವರ ಬ್ಯಾಂಕ್‌ ಖಾತೆ ನಂಬರ್‌ ಮತ್ತು ಇತರೆ ಮಾಹಿತಿಗಳನ್ನು ಪಡೆದುಕೊಂಡಿದ್ದರು. ಅವುಗಳನ್ನು ನಂತರ ಪರಿಶೀಲಿಸಿ ತಿಳಿಸುತ್ತೇವೆಂದು ಹೇಳಿ ನಂಬಿಸಿದ್ದರು. ಇದರಿಂದ ಮತ್ತಷ್ಟು ದಂಗಾದ ವೃದ್ಧೆ ಅಪರಿಚಿತ ಸೈಬರ್‌ ಕಳ್ಳರ ಸೂಚನೆಯಂತೆ ಅವರು ನೀಡಿದ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಅ.23 ರಿಂದ 31ರ ವರೆಗೆ ಒಟ್ಟು 1.24 ಕೋಟಿ ರೂ.ಗಳನ್ನು ಆರ್‌.ಟಿ.ಜಿ.ಎಸ್‌. ಮೂಲಕ ವರ್ಗಾವಣೆ ಮಾಡಿದ್ದರು. ಇದಾದ ಬಳಿಕ ಎರಡು ತಿಂಗಳುಗಳಾದರೂ ಮತ್ತೆ ತಮ್ಮನ್ನು ಯಾರೂ ಸಂಪರ್ಕಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡ ವಸಂತ ಅವರು ಆರೋಪಿಗಳು ತಮ್ಮ ವಿರುದ್ಧ ಆರೋಪಿಸಿರುವ ಕುರಿತು ಪರಿಶೀಲಿಸಿದಾಗ ತಾವು ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಕೂಡಲೇ ಸೈಬರ್‌ ಕ್ರೈಂ ಠಾಣೆಗೆ ಧಾವಿಸಿದ ವೃದ್ಧೆ ತಮಗಾದ ವಂಚನೆಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೈಬರ್‌ ಕಳ್ಳರಿಗೆ ಶೋಧ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

Techie Atul Subhash Case: ಅತುಲ್‌ನಿಂದಲೇ ನನಗೆ ತೊಂದರೆ: ಪತ್ನಿ

Techie Atul Subhash Case: ಅತುಲ್‌ನಿಂದಲೇ ನನಗೆ ತೊಂದರೆ: ಪತ್ನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.