ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Team Udayavani, Dec 19, 2024, 1:03 PM IST
ರಾಜಸ್ಥಾನ: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಸೋದರಳಿಯ ತನ್ನ ಚಿಕ್ಕಮ್ಮನ ಮೂಗನ್ನೇ ಕತ್ತರಿಸಿದ ಘಟನೆಯೊಂದು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಜಲೋರ್ನ ಸೈಲಾ ಮೂಲದ ಕುಕಿ ದೇವಿ ಎನ್ನಲಾಗಿದೆ.
ಏನಿದು ಪ್ರಕರಣ:
ಕುಕಿ ದೇವಿ ಕೆಲವು ದಿನಗಳಿಂದ ರಾಜಸ್ಥಾನದ ಸೈಲಾ ಗ್ರಾಮದ ಮೋಕ್ನಿ ಎಂಬಲ್ಲಿ ತನ್ನ ತಾಯಿಯ ಮನೆಯಲ್ಲಿ ವಾಸವಾಗಿದ್ದಳು ಎನ್ನಲಾಗಿದೆ ಈ ನಡುವೆ ತಾಯಿಗೆ ಸೇರಿದ ಜಮೀನಿನ ವಿಚಾರವಾಗಿ ಸಂಬಂಧಿಕರ ನಡುವೆ ಆಗಾಗ ಜಗಳಗಳು ನಡೆಯುತಿತ್ತು ಎನ್ನಲಾಗಿದೆ, ಈ ನಿಟ್ಟಿನಲ್ಲಿ ಕಳೆದ ಮಂಗಳವಾರ(ಡಿ.17) ಕುಕಿ ದೇವಿ ತನ್ನ ಸಹೋದರ ರಮೇಶ್ ಜೊತೆ ಸೇರಿ ಜಮೀನಿನ ವಿವಾದವನ್ನು ಬಗೆಹರಿಸಿ ಬರೋಣ ಎಂದು ಮೊಕನಿ ಗ್ರಾಮಕ್ಕೆ ತೆರಳಿದ್ದರು, ಈ ವೇಳೆ ಅಲ್ಲಿಗೆ ಬಂದ ಸೋದರಳಿಯ ಓಂ ಪ್ರಕಾಶ್ ಹಾಗೂ ಸಂಬಂಧಿಕರು ಕುಕಿ ದೇವಿಯ ಬಳಿ ಗಲಾಟೆ ಶುರು ಮಾಡಿದ್ದಾರೆ ಈ ವೇಳೆ ಮಾತಿಗೆ ಮಾತು ಬೆಳೆದು ಗಂಭೀರ ಹಂತಕ್ಕೆ ತಲುಪಿ ಓಂ ಪ್ರಕಾಶ್ ತನ್ನ ಕೈಯಲ್ಲಿದ್ದ ಚಾಕುವಿನಿಂದ ಕುಕಿ ದೇವಿಯ ಮೂಗನ್ನು ಕತ್ತರಿಸಿದ್ದಾನೆ, ಈ ವೇಳೆ ಮೂಗಿನ ಭಾಗ ತುಂಡಾಗಿ ನೆಲಕ್ಕೆ ಬಿದ್ದಿದ್ದು ರಕ್ತ ಹರಿಯತೊಡಗಿದೆ, ಕೂಡಲೇ ಕುಕಿ ದೇವಿ ತುಂಡಾದ ಮೂಗನ್ನು ಹೆಕ್ಕಿ ತನ್ನ ಬ್ಯಾಗ್ ಒಳಗೆ ಇಟ್ಟು ಪಾಲಿಯಲ್ಲಿರುವ ಬಂಗಾರ್ ಆಸ್ಪತ್ರೆಗೆ ಓಡೋಡಿ ಬಂದಿದ್ದಾಳೆ.
ಆಸ್ಪತ್ರೆಗೆ ಬಂದ ಕೂಡಲೇ ಪರಿಶೀಲಿಸಿದ ವೈದ್ಯರಿಗೆ ತನ್ನ ಬ್ಯಾಗಿನ ಒಳಗಿಂದ ಮೂಗನ್ನು ತೆಗೆದು ತೋರಿಸಿದ್ದಾರೆ ಇದನ್ನು ಕಂಡ ಬಂಗಾರ್ ಆಸ್ಪತ್ರೆಯ ಡಾ.ಜುಗಲ್ ಮಹೇಶ್ವರಿ ಒಮ್ಮೆ ಗಾಬರಿಯಾಗಿದ್ದಾರೆ. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿ ಮೂಗು ತೀವ್ರವಾಗಿ ಕತ್ತರಿಸಲ್ಪಟ್ಟಿದೆ ಮತ್ತು ಪ್ಲಾಸ್ಟಿಕ್ ಸರ್ಜರಿ ಮೂಲಕ ಮಾತ್ರ ಅದನ್ನು ಮರು ಜೋಡಿಸಲು ಸಾಧ್ಯ ಎಂದು ಹೇಳಿ ಜೋಧ್ಪುರದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ, ಸದ್ಯ ಕುಕಿ ದೇವಿಗೆ ಜೋಧ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾಳೆ.
ಆರೋಪಿಗಳ ಬಂಧನ:
ಇನ್ನು ಜಮೀನು ವಿಚಾರವಾಗಿ ಕುಕಿ ದೇವಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋದರಳಿಯ ಓಂ ಪ್ರಕಾಶ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ,
ಇದನ್ನೂ ಓದಿ: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.