Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Team Udayavani, Dec 19, 2024, 2:28 PM IST
ಸುರತ್ಕಲ್: ಮುಲ್ಕಿಯ ಕಂದಾಯ ನಿರೀಕ್ಷಕರೊಬ್ಬರು ಲಂಚ ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಡಿ.19ರ ಗುರುವಾರ ನಡೆದಿದೆ.
ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಡಿ. 19ರ ಗುರುವಾರ ಬೆಳಿಗ್ಗೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ಪಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ॥ ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ.ಎ., ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.