Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!


Team Udayavani, Dec 19, 2024, 5:19 PM IST

7

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ತೀವ್ರ ಆತಂಕ, ಕಳವಳ ಸೃಷ್ಟಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ಬೆನ್ನಲ್ಲೇ ಜಿಲ್ಲೆಯಲ್ಲಿ ಕೂಡ ನೂರಾರು ತಾಯಿ ಮಗು ಸಾವಿನ ಪ್ರಕರಣಗಳು ದಾಲಾಖಲಾಗಿರುವ ಅಘಾತಕಾರಿ ಮಾಹಿತಿ ಸಿಕ್ಕಿದೆ.

ಹೌದು, ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ 79 ಮಂದಿ ಬಾಣಂತಿಯರು ಹಾಗೂ 0-1 ವರ್ಷದೊಳಗಿನ 435 ನವಜಾತ ಶಶಿಗಳು ಕೊನೆಯಸಿರು ಎಳೆದಿರುವುದು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. ರಾಜ್ಯದ ರಾಯಚೂರು, ಕೊಪ್ಪಳ, ಬಾಗಲಕೋಟೆ ಮತ್ತಿತರ ಕಡೆಗಳಲ್ಲಿ ಬಾಣಂತಿಯರ ಸರಣಿ ಸಾವು ರಾಜ್ಯಾದ್ಯಂತ ತೀವ್ರ ಚರ್ಚೆ ಹಾಗೂ ಅಘಾತ ತಂದಿದೆ. ಆದರೆ ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಯಿ, ಮಗು ಸಾವಿನ ಪ್ರಕರಣಗಳು ದಾಖಲಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಬಹುತೇಕ ಬಾಣಂತಿಯರು ಹಾಗೂ ಮಕ್ಕಳು ಆಸ್ಪತ್ರೆಗಳಲ್ಲಿ ಅಸುನೀಗಿರುವುದು ದುರಂತವಾಗಿದೆ.

ಹೇಳಿ ಕೇಳಿ ಜಿಲ್ಲೆಯು ಇಂದಿಗೂ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಯುವ ಬಾಲ್ಯ ವಿವಾಹ ಪ್ರಕರಣಗಳು, ಪೋಕೊÕà ಪ್ರಕರಣಗಳು, ಬಡತನ, ಅನಕ್ಷರತೆ, ನಿರುದ್ಯೋಗದ ಪರಿಣಾಮ ಕೂಡ ತಾಯಿ, ಮಗು ಸಾವಿನ ಪ್ರಕರಣಗಳಿಗೆ ಮುಖ್ಯ ಕಾರಣವಾಗಿದೆ.

ತಾಯಿ, ಮಗು ಸಾವಿಗೆ ಕಾರಣಗಳೇನು?: ತಾಯಿ ಮಕ್ಕಳ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುವುದು ಹೀಗೆ. ಬಾಲ್ಯ ವಿವಾಹಗಳಿಂದ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಅವಧಿಗೂ ಮೊದಲೇ 9 ತಿಂಗಳ ಬಳಿಕ ಆಗಬೇಕಾದ ಹೆರಿಗೆ 3, 4 ತಿಂಗಳ ಮೊದಲೇ ಹೆರಿಗೆ ಆಗುವುದರಿಂದ ಈ ರೀತಿಯ ಸಾವು ಸಂಭವಿಸಲು ಪ್ರಮುಖ ಕಾರಣ ಎನ್ನುತ್ತಾರೆ ಆರೋಗ್ಯ ಇಲಾಖೆಯ ಹಿರಿಯ ನುರಿತ ವೈದ್ಯರು. ಜೊತೆಗೆ ಅಪೌಷ್ಟಿಕತೆ ಕೊರತೆ, ಮಹಿಳೆಯರನ್ನು ಕಾಡುವ ರಕ್ತದ ಕೊರತೆ ಜೊತೆಗೆ ಕೆಲ ಹೃದಯ ಸಂಬಂಧಿ ಕಾಯಿಲೆಗಳಿಂದ ಕೂಡ ನವಜಾತ ಶಿಶುಗಳು ಸಾವಿಗೆ ಮುಖ್ಯ ಕಾರಣ. ಅಲ್ಲದೇ ಜನನವಾದ ಮಗು ಕನಿಷ್ಠ 1.8 ಕೆ.ಜಿ. ಇರಬೇಕು. ಆದರೆ , ಜನಿಸುವ ಮಕ್ಕಳು ತೂಕ ಕಡಿಮೆ ಇರುವುದರಿಂದ ಮಕ್ಕಳ ಸಾವು ಸಂಭವಿಸಲು ಇದು ಪ್ರಮುಖ ಕಾರಣವಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕೂಡ ತಾಯಿ ಮಗು ಸಾವಿನ ಪ್ರಕರಣಗಳು ಪ್ರತಿ ವರ್ಷ ಜಿಲ್ಲೆಯಲ್ಲಿ ದಾಖಲಾಗುತ್ತಿವೆ. ಕೆಲವೊಂದು ಪ್ರಕರಣಗಳು ಆರೋಗ್ಯ ಇಲಾಖೆ ಗಮನಕ್ಕೆ ಬಾರದೇ ಹೋಗುತ್ತಿವೆ. ಮತ್ತೆ ಕೆಲವು ವೈದ್ಯರ ನಿರ್ಲಕ್ಷ್ಯದಿಂದಲೂ ಕೂಡ ತಾಯಿ, ಮಗು ಸಾವಿನ ಪ್ರಕರಣದಲ್ಲಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಇತ್ತೀಚೆಗೆ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರ ವೈದ್ಯರ ನಿರ್ಲಕ್ಯದದಿಂದ ಗರ್ಭಿಣಿಯರು ಮೃತಪಟ್ಟ ಬಗ್ಗೆ ಅವರ ಪೋಷಕರು ಪ್ರತಿಭಟನೆ ನಡೆಸಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.

ಆತಂಕ ಸೃಷ್ಟಿಸಿದ ನವಜಾಶು ಶಿಶುಗಳ ಮರಣ ಸಂಖ್ಯೆ: 

ಜಿಲ್ಲೆಯಲ್ಲಿ ಬಾಣಂತಿಯರ ಸಾವಿಗಿಂತ ನವಜಾಶು ಶಿಶುಗಳ ಮರಣದ ಸಂಖ್ಯೆ ತೀವ್ರವಾಗಿದೆ. ಕಳೆದ 5 ವರ್ಷದಲ್ಲಿ 435 0-1 ವರ್ಷದೊಳಗಿನ ನವಜಾತ ಶಿಶುಗಳು ಕೊನೆಯುಸಿರು ಎಳೆದಿವೆ. ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಜೊತೆಗೆ ಕಡಿಮೆ ತೂಕ ಇರುವ ಮಕ್ಕಳು ಹೆಚ್ಚು ಮರಣ ಹೊಂದಿದ್ದಾರೆ. ಜೊತೆಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಹಾಗೂ ರಕ್ತದ ಕೊರತೆಯಿಂದ ಬಹಳಷ್ಟು ಮಕ್ಕಳು ಹುಟ್ಟಿದ ಕೂಡಲೇ ಸಾವಿನ ದಾರಿ ಕಂಡಿದ್ದಾರೆ.

ತಾಯಿ, ಮಗು ಮರಣ ತಡೆಗೆ ಏನು ಮಾಡಬೇಕು? :

ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿಯೆ ವಿವಾಹ ಮಾಡುವುದನ್ನು ನಿಲ್ಲಿಸಬೇಕು. ಗರ್ಭಿಣಿಯರು ಕಾಲಕಾಲಕ್ಕೆ ಕಡ್ಡಾಯವಾಗಿ ವೈದ್ಯರ ಸಲಹೆ ಪಡೆಯುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಒಳಪಡಬೇಕು, ಗರ್ಭದಲ್ಲಿರುವ ಮಗುವಿನ ತೂಕದ ಪ್ರಮಾಣದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆಯಬೇಕು, ಗರ್ಭಿಣಿಯರು ಹೆಚ್ಚು ಪೌಷ್ಠಿಕಾಂಶವುಳ್ಳ ಆಹಾರ ಸೇವಿಸಬೇಕು, ಗರ್ಭೀಣಿಯರಿಗೆ ಸೂಕ್ತ ಆರೈಕೆ ಮಾಡಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ 79 ಬಾಣಂತಿಯರು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಆ ಪೈಕಿ 30 ಬಾಣಂತಿಯರು ಜಿಲ್ಲೆಯಲ್ಲಿ ಮೃತಪಟ್ಟರೆ, ಉಳಿದ 49 ಬಾಣಂತಿಯರು ಬೆಂಗಳೂರು ಮತ್ತಿತರ ಕಡೆ ಆಸ್ಪತ್ರೆಗಳಿಗೆ ಸಾಗಿಸುವಾಗ ಹೊರ ಜಿಲ್ಲೆಗಳಲ್ಲಿ ಮೃತಪಟ್ಟಿದ್ದಾರೆ. ಇನ್ನೂ 435 ನವಜಾತ ಶಿಶುಗಳು ಕಳೆದ 5 ವರ್ಷಗಳಲ್ಲಿ ಮೃತಪಟ್ಟಿವೆ. ಹಿಂದಿನ ವರ್ಷಗಳಿಂದ ಹೋಲಿಸಿದರೆ ಈ ವರ್ಷದಲ್ಲಿ ಜಿಲ್ಲೆಯಲ್ಲಿ ತಾಯಿ, ಮಕ್ಕಳ ಸಾವಿನ ಪ್ರಕರಣ ಕಡಿಮೆ ಆಗಿದೆ. -ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿಗಳು.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.