Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Team Udayavani, Dec 19, 2024, 6:58 PM IST
ಗದಗ: ನೀರಿನ ಟ್ಯಾಂಕರ್ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ.
ರೀದಾ ಸೊರಟೂರು ಅನ್ನುವ 2 ವರ್ಷದ ಕಂದಮ್ಮ ಅಪಘಾತದಲ್ಲಿ ಉಸಿರು ಚೆಲ್ಲಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಗುವನ್ನು ಅವರ ಸಂಬಂಧಿ ಸ್ಕೂಟಿಯಲ್ಲಿ ಮುಂದಗಡೆ (ಕಾಲಿನ ಬಳಿ) ಕೂರಿಸಿಕೊಂಡು ಹೋಗುತ್ತಿರುವಾಗ ಎದುರಿಗೆ ಟ್ರ್ಯಾಕ್ಟರ್ ಬಂದಿದೆ. ಇದರಿಂದ ರಸ್ತೆ ಪಕ್ಕಕ್ಕೆ ಚಾಲಕಿ ಬೈಕ್ ನಿಲ್ಲಿಸಿದ್ದಾಳೆ. ತಕ್ಷಣ ಆಯ ತಪ್ಪಿ ಮಗುವು ಬೈಕ್‌ನಿಂದ ರಸ್ತೆಗೆ ಉರುಳಿ ಬಿದ್ದಿದೆ. ಕ್ಷಣಮಾತ್ರದಲ್ಲೇ ಯಮಸ್ವರೂಪಿಯಾಗಿ ಬಂದ ನೀರಿನ ಟ್ಯಾಂಕರ್ ನ ಹಿಂಬದಿ ಚಕ್ರಕ್ಕೆ ಮಗುವಿನ ತಲೆಬುರುಡೆ ಸಿಕ್ಕು ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮಗು ಸಾವನ್ನಪ್ಪಿದೆ.
ಕಣ್ಣೆದುರಿಗೆ ತನ್ನ ಕಂದಮ್ಮ ಬಲಿಯಾದ ದೃಶ್ಯ ನೋಡಿದ ಬೈಕ್ ಚಲಾಯಿಸುತ್ತಿದ್ದ ಮಗುವಿನ ಸಂಬಂಧಿ ಮಗುವನ್ನ ಎತ್ತಿಕೊಂಡು ಗೋಳಾಟ ನಡೆಸಿದ್ದಾಳೆ. ನಂತರ ಸ್ಥಳಿಯರು ಜಮಾಯಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.