Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

ನಾನು ತಪ್ಪಿತಸ್ಥನಾದರೆ ನನ್ನ ಮೇಲೂ ಕ್ರಮವಾಗಲಿ

Team Udayavani, Dec 20, 2024, 8:37 AM IST

5-dinesh

ಬೆಳಗಾವಿ: ರಾಜ್ಯದಲ್ಲಿ ಸಂಭವಿ ಸಿರುವ ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ನಾವು ಸಿದ್ಧರಿದ್ದೇವೆ. ಅದೇ ರೀತಿ ಬಾಣಂತಿಯರ ಸಾವು ಪ್ರಕರಣಗಳ ಆಡಿಟ್‌ ಕೂಡ ನಡೆಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಈ ಬಗ್ಗೆ ವಿಧಾನಸಭೆಯಲ್ಲಿ ನಡೆದಿದ್ದ ಚರ್ಚೆ ವೇಳೆ ವಿಪಕ್ಷಗಳು ಕೇಳಿದ್ದ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದ ಅವರು, ತನಿಖೆಯಲ್ಲಿ ನಾನು ತಪ್ಪಿತಸ್ಥ ಎಂದು ತಿಳಿದು ಬಂದರೆ ನಾನೂ ಕ್ರಮ ಎದುರಿಸಲು ಸಿದ್ಧ ಎಂದರು.

ನ. 9, 10 ಹಾಗೂ 11ರಂದು ಬಳ್ಳಾರಿ ಆಸ್ಪತ್ರೆಯಲ್ಲಿ 34 ಸಿಸೇರಿಯನ್‌ ಹೆರಿಗೆ ಮಾಡಲಾಗಿದೆ. ಹೆರಿಗೆ ಬಳಿಕ ಅಸ್ವಸ್ಥಗೊಂಡಿದ್ದ 7 ಮಂದಿಯಲ್ಲಿ ಐವರು ಬಾಣಂತಿಯರು ಸಾವಿಗೀಡಾಗಿದ್ದರು. ಘಟನೆ ತಿಳಿದ ತತ್‌ಕ್ಷಣವೇ ಸಾವಿನ ಕಾರಣ ತಿಳಿಯಲು ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ.ಯ ವೈದ್ಯರ ತಂಡ ರಚಿಸಿ ಬಳ್ಳಾರಿಗೆ ಕಳುಹಿಸಿಕೊಡಲಾಯಿತು.

ಈ ತಂಡವು ನ. 12, 13ರಂದು ಕೂಲಂಕಷ ಅಧ್ಯಯನ ನಡೆಸಿ, ನ. 14ರಂದು ವರದಿ ನೀಡಿದೆ. ಇದರಲ್ಲಿ ವೈದ್ಯರು ಶಸ್ತ್ರಚಿಕಿತ್ಸೆಯ ಎಲ್ಲ ಶಿಷ್ಟಾಚಾರವನ್ನೂ ಪಾಲಿಸಿದ್ದು, ವೈದ್ಯರಿಂದ ಲೋಪವಾಗಿಲ್ಲ, ಬದಲಾಗಿ ಸಿಸೇರಿಯನ್‌ ಅನಂತರ ಬಾಣಂತಿಯರಿಗೆ ನೀಡಿದ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣದ ಪ್ರತಿಕೂಲ ಪರಿಣಾಮದಿಂದ ಸಾವು ಸಂಭವಿಸಿರುವುದಾಗಿ ವರದಿ ಹೇಳಿಕೆ.

ಪಶ್ಚಿಮ್‌ ಬಂಗಾ ಕಂಪೆನಿ ಪೂರೈಸಿದ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣವನ್ನು ರಾಜ್ಯದ ಇತರ ಆಸ್ಪತ್ರೆಗಳಿಗೂ ಪೂರೈಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಭವಿಸಿದ ಬಾಣಂತಿಯರ ಸಾವಿನ ಲೆಕ್ಕ ಪರಿಶೋಧನೆಗೂ ಸೂಚನೆ ನೀಡಿದ್ದೇನೆ. ಅಭಿವೃದ್ಧಿ ಆಯುಕ್ತರೂ ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ. ತಜ್ಞ ವೈದ್ಯರಿಂದಲೂ ತನಿಖೆ ನಡೆಯುತ್ತಿದೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಆಡಳಿತದಲ್ಲಿ ಸುಧಾರಣೆಗೆ ವರದಿ ನೀಡಲು ಹಿರಿಯ ಐಎಎಸ್‌ ಅಧಿಕಾರಿಯನ್ನು ಕೂಡ ನೇಮಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದರು.

ಬಿಜೆಪಿ ಸಭಾತ್ಯಾಗ

ಸಚಿವ ದಿನೇಶ್‌ ಗುಂಡೂರಾವ್‌ ಉತ್ತರ ನೀಡಿದರೂ ಪಟ್ಟು ಬಿಡದ ವಿಪಕ್ಷ ಬಿಜೆಪಿ ಸದಸ್ಯರು ಸಚಿವ ಸ್ಥಾನದಿಂದ ದಿನೇಶ್‌ ಗುಂಡೂರಾವ್‌ ಅವರನ್ನು ಕೈಬಿಡಬೇಕೆಂದು ಬಾವಿಗಿಳಿದು ಧರಣಿ ನಡೆಸಿದರು. ಅಷ್ಟರಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರಿಸಲು ಸಿಎಂ ಮುಂದಾಗುತ್ತಿದ್ದಂತೆ, “ಕೊಲೆಗಡುಕ ಸರಕಾರದ ಉತ್ತರ ಬೇಕಿಲ್ಲ’ ಎನ್ನುತ್ತ ಸಭಾತ್ಯಾಗ ಮಾಡಿದರು.

ಪ್ರಯೋಗಾಲಯಗಳ ಮೇಲೆಯೇ ಅನುಮಾನ!

ಮಾರ್ಚ್‌- ಎಪ್ರಿಲ್‌ನಲ್ಲಿ ಪಶ್ಚಿಮ್‌ ಬಂಗಾ ಕಂಪೆನಿ ಪೂರೈಸಿದ್ದ ದ್ರಾವಣದಿಂದ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಹಲವರಿಗೆ ಚಳಿ, ನಡುಕ ಆರಂಭವಾಗಿತ್ತು. ಗುಂಡ್ಲುಪೇಟೆ ಆಸ್ಪತ್ರೆಯಲ್ಲೂ ಸಮಸ್ಯೆ ಆಗಿತ್ತು. ರಾಷ್ಟ್ರೀಯ ಮಾನ್ಯತೆ ಪಡೆದ (ಎನ್‌ಎಬಿಎಲ್‌) ಪ್ರಯೋಗಾಲಯ ಹಾಗೂ ವೈದ್ಯಕೀಯ ಸರಬರಾಜು ನಿಗಮದ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿದಾಗ ಕಳಪೆ ಗುಣಮಟ್ಟದ್ದೆಂದು ವರದಿ ಬಂದಿತ್ತು. ಹೀಗಾಗಿ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಾರಣ ಕೇಳಿ ನೋಟಿಸ್‌ ಕೊಟ್ಟು 192 ಬ್ಯಾಚ್‌ ಐವಿ ದ್ರಾವಣಗಳ ಮೇಲೆ ನಿರ್ಬಂಧ ವಿಧಿಸಿದ್ದೆವು.

ಇದನ್ನೆಲ್ಲ ಪ್ರಶ್ನಿಸಿ ಕಂಪೆನಿಯು ನ್ಯಾಯಾಲಯದ ಮೊರೆ ಹೋಗಿತ್ತಲ್ಲದೆ, ಕೇಂದ್ರೀಯ ಪ್ರಯೋಗಾಲಯದಿಂದ “ಗುಣಮಟ್ಟದ ದ್ರಾವಣ’ ಎಂಬ ಪ್ರಮಾಣಪತ್ರ ಪಡೆದಿತ್ತು. ಹೀಗಾಗಿ ನಾವೂ ಮೇಲ್ಮನವಿ ಸಲ್ಲಿಸಲಿಲ್ಲ. ಬದಲಿಗೆ ನಿರ್ಬಂಧವನ್ನು ಮುಂದುವರಿಸಿದ್ದೆವು.

ಜೂನ್‌ ತಿಂಗಳ ವೇಳೆಗೆ ರಾಜ್ಯದಲ್ಲಿ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣಕ್ಕೆ ಬೇಡಿಕೆ ಹೆಚ್ಚಾಯಿತು. ಆಗ ಪಶ್ಚಿಮ್‌ ಬಂಗಾ ಕಂಪೆನಿಯ ಐವಿ ದ್ರಾವಣದ 192 ಬ್ಯಾಚ್‌ಗಳ ಗುಣಮಟ್ಟವನ್ನು ಮತ್ತೂಮ್ಮೆ ಪರಿಶೀಲಿಸಿ, 22 ಬ್ಯಾಚ್‌ಗಳನ್ನು ಕಳಪೆ ಎಂದು ತಡೆಹಿಡಿದು ಉಳಿದ ಬ್ಯಾಚ್‌ಗಳ ಐವಿ ದ್ರಾವಣವನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಿದೆವು. ಆಗಸ್ಟ್‌, ಸೆಪ್ಟಂಬರ್‌, ಅಕ್ಟೋಬರ್‌ನಲ್ಲಿ ಐವಿ ದ್ರಾವಣದ ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ನ. 9ರಂದು ಬಳ್ಳಾರಿ ಆಸ್ಪತ್ರೆಗೆ ಪಶ್ಚಿಮ್‌ ಬಂಗಾ ಕಂಪೆನಿ ಪೂರೈಸಿದ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣ ಪೂರೈಕೆಯಾಗಿದೆ. ಅನಂತರ ಸರಣಿ ಬಾಣಂತಿಯರ ಸಾವು ಸಂಭವಿಸಿದೆ. ಕೂಡಲೇ ಈ ಐವಿ ದ್ರಾವಣವನ್ನು ಎನ್‌ಎಬಿಎಲ್‌ ಲ್ಯಾಬ್‌ಗಳಲ್ಲಿ 6 ಬಾರಿ ಪರೀಕ್ಷೆಗೆ ಒಳಪಡಿಸಿದ್ದು, 5 ಬಾರಿ ಗುಣಮಟ್ಟದ್ದು ಎಂದೇ ವರದಿ ಬಂದಿತ್ತು. ಕೊನೆಯ ಬಾರಿ ಪರೀಕ್ಷೆ ನಡೆಸಿದಾಗ ಗುಣಮಟ್ಟವಿಲ್ಲ ಎಂದು ವರದಿ ಬಂದಿದ್ದು, ಹೈದರಾಬಾದ್‌ ಲ್ಯಾಬ್‌ ವರದಿಯಲ್ಲಿ ಮಾತ್ರ ಐವಿ ದ್ರಾವಣದಲ್ಲಿ ಎಂಡೋ ಟಾಕ್ಸಿಕ್‌ ಅಂಶ ಇರುವುದಾಗಿ ಪತ್ತೆಯಾಗಿದೆ ವಿವರಿಸಿದರು.

ಬಾಣಂತಿಯರ ಸಾವು ಆಗಬಾರದಿತ್ತು. ಇದು ಗಂಭೀರ ಸ್ವರೂಪದ ಪ್ರಕರಣ ಎಂದು ಸರಕಾರ ಪರಿಗಣಿಸಿದೆ. ತನಿಖೆಗೆ ಒಪ್ಪಿಸುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಬಾಣಂತಿಯರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ. -ಸಿದ್ದರಾಮಯ್ಯ, ಮುಖ್ಯಮಂತ್ರಿ

ಬಾಣಂತಿಯರ ಸಾವು ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹಾಲಿ ನಾಯಾಧೀಶರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಆಗಬೇಕು. ಸಚಿವ ಸ್ಥಾನದಿಂದ ದಿನೇಶ್‌ ಗುಂಡೂರಾವ್‌ ಅವರನ್ನು ಕೈಬಿಡಬೇಕು. – ಆರ್‌. ಅಶೋಕ್‌,  ವಿಪಕ್ಷ ನಾಯಕ

ಪಶ್ಚಿಮ ಬಂಗಾಲ ಕಂಪೆನಿಗೆ ರಾಜ್ಯ, ಕೇಂದ್ರ ಸರಕಾರದ ಅಧಿಕಾರಿಗಳು ತೆರಳಿ ಪರಿಶೀಲಿಸಿದ್ದು, ಔಷಧ ತಯಾರಿಕೆಗೆ ತಡೆ ವಿಧಿಸಲಾಗಿದೆ. ಕಂಪೆನಿಯಿಂದ ಪರಿಹಾರವನ್ನು ಕೊಡಿಸಿಯೇ ಕೊಡಿಸುತ್ತೇವೆ. – ದಿನೇಶ್‌ ಗುಂಡೂರಾವ್‌,  ಆರೋಗ್ಯ ಸಚಿವ

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.