Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Team Udayavani, Dec 20, 2024, 11:42 AM IST
ನವದೆಹಲಿ: ಮೂರು ವರ್ಷಗಳ ಹಿಂದೆ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರು ನಿಧನಹೊಂದಿದ್ದು, ಹೆಲಿಕಾಪ್ಟರ್ ಪತನಕ್ಕೆ ಮಾನವ ಲೋಪವೇ ಕಾರಣ ಎಂದು ರಕ್ಷಣಾ ಸ್ಥಾಯಿ ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
2021ರ ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರು ಬಳಿಯ ಪರ್ವತ ಪ್ರದೇಶದಲ್ಲಿ Mi-17 V5 ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಅವಘಡದಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು 12 ಮಂದಿ ಸಾವನ್ನಪ್ಪಿದರು.
ಇದೀಗ ಘಟನೆ ನಡೆದು ಮೂರೂ ವರ್ಷಗಳ ಬಳಿಕ ಸಂಸತ್ತಿನ ಸ್ಥಾಯಿ ಸಮಿತಿಯು ಲೋಕಸಭೆಯಲ್ಲಿ ರಾವತ್ ಅವರ ಸಾವಿನ ಕುರಿತು ತನಿಖಾ ವರದಿಯನ್ನು ಮಂಡಿಸಿದ್ದು ಹೆಲಿಕಾಪ್ಟರ್ ಅವಘಡಕ್ಕೆ ಮಾನವ ಲೋಪವೇ ಕಾರಣ ಎಂದು ವರದಿಯಲ್ಲಿ ತಿಳಿಸಿದೆ.
ಸಂಸತ್ತಿನ ಸ್ಥಾಯಿ ಸಮಿತಿ ಸಲ್ಲಿಸಿದ ವರದಿಯಲ್ಲಿ 2017 ರಿಂದ 2022 ರ ವರೆಗೆ ಭಾರತೀಯ ವಾಯು ಸೇನೆಯಲ್ಲಿ ಒಟ್ಟು 34 ಅವಘಡಗಳು ಸಂಭವಿಸಿರುವುದಾಗಿ ಉಲ್ಲೇಖಿಸಿದೆ ಜೊತೆಗೆ 2021-2022ರ ಅವಧಿಯಲ್ಲಿ ಒಟ್ಟು ಒಂಬತ್ತು ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.