H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Team Udayavani, Dec 20, 2024, 11:56 PM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಆದರೆ ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ವಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದವರು ಹೇಳಿದ್ದಾ ರೆ.
ಬಂಡೆ ಬೆಂಬಲದಿಂದ ಕ್ರಿಮಿನಲ್ ಪ್ರವೃತ್ತಿ
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್ ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.