Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Team Udayavani, Dec 21, 2024, 7:36 PM IST
ನವದೆಹಲಿ: ಉತ್ತರ ದೆಹಲಿಯ ತಿಮಾರ್ಪುರ ಪ್ರದೇಶದಲ್ಲಿ ತನ್ನ ಶಿಷ್ಯೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 89 ವರ್ಷದ ಮಹಂತರೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ(ಡಿ 21) ತಿಳಿಸಿದ್ದಾರೆ.
ತಿಮಾರ್ಪುರದ ಲಕ್ನೋ ರಸ್ತೆಯ ಕಬೀರ್ ಮಂದಿರದ ರಾಜಾ ರಾಮ್ ದಾಸ್ ವಿರುದ್ಧ ಆಪಾದಿತ ಅಪರಾಧವನ್ನು ವರದಿ ದೂರು ಡಿಸೆಂಬರ್ 13 ರಂದು ದಾಖಲಾಗಿತ್ತು. ಈ ಸಂಬಂಧ ದಾಸ್ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಿಮಾರ್ಪುರದ ಕಬೀರ್ ವಿಜ್ಞಾನ ಆಶ್ರಮ ನಡೆಸುತ್ತಿರುವ ಸದ್ಗುರು ರಾಜಾ ರಾಮ್ ಸಾಹಬ್ ಧಾರ್ಮಿಕ್ ಟ್ರಸ್ಟ್ನ ಮಹಂತ್ , ಏಪ್ರಿಲ್ 14 ರ ರಾತ್ರಿ ತನ್ನ ಆಶ್ರಮದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ 51 ವರ್ಷದ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ದಾಸ್ ಅವರು ತಿಮಾರ್ಪುರದ ಸದ್ಗುರು ಕಬೀರ್ ಮಂದಿರ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ.
ಏತನ್ಮಧ್ಯೆ, ಆಶ್ರಮವನ್ನು ಅಕ್ರಮವಾಗಿ ದೋಚಲು ಪ್ರಯತ್ನಿಸಿದರು ಎಂದು ಆರೋಪಿಸಿ ಸಂತ್ರಸ್ತೆ ಮತ್ತು ಇತರ ಐದು ಜನರ ವಿರುದ್ಧ ಮಹಂತ್ ದಾಸ್ ಅವರು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಎರಡೂ ವಿಷಯಗಳ ಕುರಿತು ವಿಚಾರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.