Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
ಖಾತೆ ಹಂಚಿಕೆ: ಇಬ್ಬರು ಸಚಿವರಿಗೆ ಜಲಸಂಪನ್ಮೂಲ.. ಅಜಿತ್ಗೆ ವಿತ್ತ
Team Udayavani, Dec 22, 2024, 6:59 AM IST
ಮುಂಬಯಿ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಗೃಹ ಖಾತೆ ನಿರೀಕ್ಷೆಯಲ್ಲಿ ಇದ್ದ ಡಿಸಿಎಂ ಏಕನಾಥ ಶಿಂಧೆಯವರಿಗೆ ನಗರಾಭಿವೃದ್ಧಿ, ವಸತಿ, ಲೋಕೋಪಯೋಗಿ ಖಾತೆಗಳು ಲಭಿಸಿವೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿರೀಕ್ಷೆಯಂತೆ ಗೃಹ ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಜತೆಗೆ ಇಂಧನ ಹಾಗೂ ಕಾನೂನು ಖಾತೆಯನ್ನೂ ಇರಿಸಿಕೊಂಡಿದ್ದಾರೆ.
ಮತ್ತೂಬ್ಬ ಡಿಸಿಎಂ ಅಜಿತ್ ಪವಾರ್ಗೆ ವಿತ್ತ ಖಾತೆ ನೀಡಲಾಗಿದೆ. ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರಾಗಿರುವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ. ಗೃಹ ಖಾತೆ ತಮಗೇ ಬೇಕೆಂದು ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಪ್ರಕಟವಾದ ದಿನ (ನ.23)ದಿಂದ ಏಕನಾಥ ಶಿಂಧೆ ಪಟ್ಟುಹಿಡಿದ್ದರು. ಡಿ.5ರಂದು ಫಡ್ನವೀಸ್, ಶಿಂಧೆ, ಅಜಿತ್ ಪವಾರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ಸ್ವೀಕರಿಸಿದ್ದರೆ, ಡಿ.15ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.