Karavali Utsava: ವೈವಿಧ್ಯಮಯ ಸಂಸ್ಕೃತಿಯೇ ದ. ಕನ್ನಡ ಜಿಲ್ಲೆಯ ವಿಶೇಷತೆ: ಸಚಿವ ದಿನೇಶ್
"ಕರಾವಳಿ ಉತ್ಸವ'ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ,
Team Udayavani, Dec 22, 2024, 3:25 AM IST
ಮಂಗಳೂರು: ದಕ್ಷಿಣ ಕನ್ನಡವು ವೈವಿಧ್ಯಮಯ ಸಂಸ್ಕೃತಿಯ ಜಿಲ್ಲೆ. ಇಂಥ ವೈಶಿಷ್ಟ್ಯಪೂರ್ಣವಾದ ಪುಣ್ಯ ಭೂಮಿಯಲ್ಲಿ ಕಾರಣಾಂತರಗಳಿಂದ ಮೂರು ವರ್ಷಗಳಿಂದ ನಿಂತಿದ್ದ ಕರಾವಳಿ ಉತ್ಸವವನ್ನು ಮತ್ತೆ ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ಜ.19ರ ವರೆಗೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ವಸ್ತು ಪ್ರದರ್ಶನ, ಎರಡು ದಿನಗಳ ಸಾಂಸ್ಕೃತಿಕ ದರ್ಶನ, ತಣ್ಣೀರುಬಾವಿ ಯಲ್ಲಿ ನಡೆಯುವ ಬೀಚ್ ಉತ್ಸವ, ಗಾಳಿ ಪಟ ಉತ್ಸವ ಸಹಿತ ಕರಾವಳಿ ಸಂಸ್ಕೃತಿಯ ಅನಾವರಣದ “ಕರಾವಳಿ ಉತ್ಸವ’ಕ್ಕೆ ಶನಿವಾರ ಚಾಲನೆ ನೀಡಿ ಸಚಿವರು ಮಾತನಾಡಿದರು.
ರಾಜ್ಯ ಮಟ್ಟದ ಒಲಿಂಪಿಕ್ಸ್ ಅನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಕ್ರೀಡೆ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯ ಕ್ರಮಗಳು ಒಂದು ತಿಂಗಳ ಕಾಲ ಜರಗಲಿದೆ. ಜಿಲ್ಲೆಯಲ್ಲಿ ತುಳು, ಕೊಂಕಣಿ, ಅರೆಭಾಷೆ, ಬ್ಯಾರಿ, ಹವ್ಯಕ, ಕನ್ನಡ ಸಹಿತ ಹಲವು ಭಾಷಿಗರಿದ್ದಾರೆ. ಜನರೂ ತಮ್ಮದೇ ಆದ ಸಾಂಸ್ಕೃತಿಕ ಪಾರಂಪರಿಕ ಪದ್ಧತಿಗಳನ್ನು ಉಳಿಸಿಕೊಂಡು ಬಂದಿದ್ದಾರೆ. ಹಲವು ಸಂಘ ಸಂಸ್ಥೆಗಳನ್ನು ಕಟ್ಟಿ ಕೊಂಡಿದ್ದಾರೆ. ಇಲ್ಲಿ ವಿವಿಧ ಹಬ್ಬಗಳ ಆಚರಣೆ, ಧಾರ್ಮಿಕ ಕೇಂದ್ರಗಳು ಎಲ್ಲವೂ ವಿಶ್ವ ಪ್ರಸಿದ್ಧಿ ಪಡೆದಿದೆ ಎಂದು ಅವರು ಹೇಳಿದರು.
ತುಳುನಾಡ ಉತ್ಸವವಾಗಲಿ: ಮೇಯರ್
ಮೇಯರ್ ಮನೋಜ್ ಕುಮಾರ್ ಮಾತನಾಡಿ, ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ – ಪರಂಪರೆಗೆ ಉತ್ಸವದ ರೂಪವನ್ನು ಕರಾವಳಿ ಉತ್ಸವದ ಮೂಲಕ ನೀಡಲಾಗಿದೆ. ನಮ್ಮಲ್ಲಿ ಹಲವು ಭಿನ್ನತೆಗಳಿದ್ದರೂ, ಏಕತೆಯ ಮೂಲಕ ಸಾಗಿ ಜಿಲ್ಲೆಯನ್ನು ಮುಂಚೂಣಿಗೆ ತಂದಿದ್ದೇವೆ. ಮುಂದಿನ ವರ್ಷದಿಂದ “ಕರಾವಳಿ ಉತ್ಸವ’ಕ್ಕೆ “ತುಳುನಾಡ ಉತ್ಸವ’ ಎಂದು ಹೆಸರಿಡುವ ಮೂಲಕ ಇನ್ನಷ್ಟು ವಿಜೃಂಭಣೆ ಯಿಂದ ಆಚರಿಸುವಂತಾಗಲಿ ಎಂದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಡಿ ಯಾಲಬೈಲ್‌ನ ಅಲೋಶಿಯಸ್ ಪದವಿಪೂರ್ವ ಕಾಲೇಜು ಬಳಿಯಿಂದ ಕರಾವಳಿ ಉತ್ಸವ ಮೈದಾನದವರೆಗೆ ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ, ತುಳು, ಕೊಂಕಣಿ, ಬ್ಯಾರಿ ಅಕಾಡೆಮಿ ಪ್ರಾಯೋಜಿತ ಕಾರ್ಯಕ್ರಮಗಳು ಪ್ರಸ್ತುತಗೊಂಡವು.
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕೆ., ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮನಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಪಂ ಸಿಇಒ ಡಾ| ಆನಂದ್ ಕೆ., ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸ್‌ಪಿ ಯತೀಶ್ ಎನ್., ಮನಪಾ ಆಯುಕ್ತ ಆನಂದ್ ಸಿ.ಎಲ್.,
ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ, ಕರ್ಣಾಟಕ ಬ್ಯಾಂಕ್ ಜಿಎಂ ಜಯನಾಗರಾಜ ಎಸ್.ರಾವ್., ಎಂಆರ್‌ಪಿಎಲ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಡೈರೆಕ್ಟರ್ ಫೈನಾನ್ಸ್ ಎಂ. ಶ್ಯಾಮ್ ಪ್ರಸಾದ್ ಕಾಮತ್, ಕೆಸಿಸಿಐ ಅಧ್ಯಕ್ಷ ಆನಂದ್ ಜಿ.ಪೈ, ಕ್ರೆಡಾೖನ ವಿನೋದ್ ಪಿಂಟೋ, ರೋಹನ್ ಕಾರ್ಪೊರೇಶನ್‌ನ ರೋಹನ್ ಮೊಂತೇರೊ ಉಪಸ್ಥಿತರಿದ್ದರು. ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.