Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
Team Udayavani, Dec 22, 2024, 11:56 AM IST
ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೆಲಮಂಗಲ ನಿವಾಸಿ ಐಶ್ವರ್ಯ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಹರೀಶ್ ಅಲಿಯಾಸ್ ನವೀನ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ನವೀನ್ ಹಾಗೂ ಐಶ್ವರ್ಯ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಒಂದು ಮಗು ಇದೆ. ಬಾಗಲಗುಂಟೆ ಕರೆ ಸಮೀಪದ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಐಶ್ವರ್ಯ ಎಸ್ಕೆವೈ ಎಂಬ ಸಲೂನ್ ನಡೆಸುತ್ತಿದ್ದು, ರೀಲ್ಸ್ ಕೂಡ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಇನ್ನು ನವೀನ್ ಕ್ಯಾಬ್ ಚಾಲಕನಾಗಿದ್ದಾನೆ. ಈ ಮಧ್ಯೆ ಪತಿ ನವೀನ್, ಬೇರೊಂದು ಮಹಿಳೆ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡ ಐಶ್ವರ್ಯ, ಒಂದು ವಾರದಿಂದ ಇದೇ ವಿಚಾರಕ್ಕೆ ಪತಿ ಜತೆ ಜಗಳ ಮಾಡುತ್ತಿದ್ದರು. ಮತ್ತೂಂದೆಡೆ ನವೀನ್, ಪತ್ನಿಗೆ ಹೇಳದೆ ಧರ್ಮಸ್ಥಳಕ್ಕೆ ತೆರಳಿದ್ದರು. ಅದರಿಂದ ಇನ್ನಷ್ಟು ಅನುಮಾನಗೊಂಡ ಐಶ್ವರ್ಯ, ಪತಿ ನವೀನ್ ಮನೆಗೆ ಬರುತ್ತಿದ್ದಂತೆ ಆತನ ಜತೆ ಜಗಳ ಮಾಡಿದ್ದಾಳೆ. ಬಳಿಕ ಕೋಪಗೊಂಡು ಕೋಣೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.