Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
ಈ ಮೊದಲು ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಪ್ರಿನ್ಸ್ ಚಾರ್ಲ್ಸ್‌ಗೆ ಸಂದಿದ್ದ ಪ್ರಶಸ್ತಿ
Team Udayavani, Dec 22, 2024, 7:26 PM IST
ಕುವೈಟ್ ಸಿಟಿ: ಎರಡು ದಿನಗಳ ಅಧಿಕೃತ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈಟ್‌ನ ಅಮೀರ್ (ದೊರೆ) ಶೇಖ್ ಮೆಶಾಲ್ ಅಲ್ ಅಹ್ಮದ್ ಅಲ್ ಜಾಬರ್ ಅಲ್ ಸಬಾಹ್ ರವಿವಾರ ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಕುವೈಟ್‌ನ (ಗಲ್ಫ್ ರಾಷ್ಟ್ರದ) ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಿದರು.
ಕುವೈಟ್‌ನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ನ್ನು ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸೂಚಕವಾಗಿ ನೀಡಲಾಗುತ್ತದೆ. ಈ ಮೊದಲು ಅಮೆರಿಕ ಅಧ್ಯಕ್ಷರಾಗಿದ್ದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಯುಕೆ ರಾಜ ಪ್ರಿನ್ಸ್ ಚಾರ್ಲ್ಸ್ ಈ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೆ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಗೌರವಗಳಿಗೆ ಪಾತ್ರರಾಗಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ರವಿವಾರ ಪ್ರಧಾನಿ ಮೋದಿ ಕುವೈಟ್ ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಸ್ವೀಕರಿಸುವ ಬಯಾನ್ ಅರಮನೆಯಲ್ಲಿ ವಿಧ್ಯುಕ್ತ ಸ್ವಾಗತ ಮತ್ತು ಗೌರವ ರಕ್ಷೆಗಳ ನೀಡಿ ಸ್ವಾಗತಿಸಲಾಯಿತು. ಬಳಿಕ ಪ್ರಧಾನಿ ಮೋದಿ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದರು.
#WATCH | A moment of pride for India as Kuwait has conferred its highest honour ‘Order of Mubarak Al Kabeer’ to PM @narendramodi
🔗https://t.co/KBMSFwt7Kq@PMOIndia @MEAIndia @indembkwt#PMModiInKuwait #PMModi #KuwaitVisit pic.twitter.com/3d6WIAC9f9
— DD News (@DDNewslive) December 22, 2024
ಕುವೈಟ್‌ನ ಅಮೀರ್ ಶೇಖ್ ಮೆಶಾಲ್ ಅಲ್ ಅಹ್ಮದ್ ಅಲ್ ಜಾಬರ್ ಅಲ್ ಸಬಾಹ್ ಆಹ್ವಾನದ ಮೇರೆಗೆ ಕುವೈಟ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಕುವೈಟ್ ದೊರೆ ಅಲ್ ಖಾಲಿದ್ ಅಲ್ ಸಬಾಹ್ ಮತ್ತು ಕುವೈಟ್ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದಾರೆ. ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಗಯಾನಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ಸ್ವೀಕರಿಸಿದ್ದರು.
Excellent meeting with His Highness the Amir of Kuwait, Sheikh Meshal Al-Ahmad Al-Jaber Al Sabah.
We discussed cooperation in key sectors like pharmaceuticals, IT, FinTech, Infrastructure and security.
In line with the close ties between our nations, we have elevated our… pic.twitter.com/yjBXjZk7gd
— Narendra Modi (@narendramodi) December 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.