Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
Team Udayavani, Dec 22, 2024, 10:50 PM IST
ಮಲ್ಪೆ: ಕಲ್ಮಾಡಿ ಚರ್ಚ್ನ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯೂಮಿನಿಯಂನ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ 2ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಪ್ರದೇಶದ ಮೋಹನ್ ರಾಮ್ (29) ಸಾವನ್ನಪ್ಪಿದ್ದು, ಅವರು ಕಳೆದ 20 ದಿನಗಳಿಂದ ಕಲ್ಮಾಡಿ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯುಮಿನಿಯಂನ ಬೀಡಿಂಗ್ ಗ್ಲಾಸ್ನ ಕೆಲಸ ಮಾಡುತ್ತಿದ್ದರು. ಡಿ. 17ರಂದು 2ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಅವರಿಗೆ ತಲೆ, ಎದೆಯ ಭಾಗ, ಮತ್ತು ಬೆನ್ನಿಗೆ ತೀವ್ರ ಸ್ವರೂಪದ ಗಾಯವಾಗಿತ್ತು.
ತತ್ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ. 21ರಂದು ಮೃತಪಟ್ಟಿದ್ದಾರೆ. ಕಟ್ಟಡದ ಮಾಲಕರು ಮತ್ತು ಗುತ್ತಿಗೆದಾರರ ಕೆಲಸದ ಸಮಯದಲ್ಲಿ ಮುಂಜಾಗ್ರತೆ ವಹಿಸಿದೇ ನಿರ್ಲಕ್ಷ್ಯತನ ತೋರಿದ್ದಾರೆ ಎಂದು ದೂರಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.