Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Team Udayavani, Dec 23, 2024, 1:10 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯ-ಹೊರರಾಜ್ಯ ಗಳ ಸ್ಪಾಗಳಲ್ಲಿ ಹೈಟೆಕ್ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಮಹದೇವಪುರದ ಅನಿಲ್ ಕುಮಾರ್ ಅಲಿಯಾಸ್ ಅನಿಲ್ ರೆಡ್ಡಿ(40) ಬಂಧಿತ ಆರೋಪಿ. ಈತ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿ ಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಬೆಂಗಳೂರಿಗೆ ಕರೆಸಿಕೊಂಡು ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ. ಬಳಿಕ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಈತನ ಮಾನವ ಕಳ್ಳ ಸಾಗಣೆ ಹಾಗೂ ವೇಶ್ಯವಾಟಿಕೆ ದಂಧೆ ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಆರೋಪಿ ಅನಿಲ್ ಕುಮಾರ್ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೇಶ್ಯಾಗೃಹಗಳನ್ನು ನಡೆ ಸುವುದನ್ನು ಮುಂದುವರಿಸಿದ್ದ ಎಂಬುದು ಗೊತ್ತಾಗಿದೆ. ಹೀಗಾಗಿ ಮಹದೇವಪುರ ಪೊಲೀಸರು, ಸಿಸಿಬಿ ಅಧಿಕಾರಿಗಳಿಂದ ಆರೋಪಿ ಅನಿಲ್ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ನಗರ ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆಯುಕ್ತರ ಸಮ್ಮತಿ ಮೇರೆಗೆ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.