Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Team Udayavani, Dec 23, 2024, 1:14 PM IST
ಬೆಂಗಳೂರು: ಕರ್ನಾಟಕ ಖಾಸಗಿ ನರ್ಸಿಂಗ್ ಹೋಮ್ ನಿಯಂತ್ರಣ ತಿದ್ದುಪಡಿ ಕಾಯಿದೆ (ಕೆಪಿಎಂಇ ) ನೋಂದಣಿ ಮತ್ತು ಕುಂದು ಕೊರತೆ ಪ್ರಾಧಿಕಾರದ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಡಿ.19ರಂದು ನಡೆದ ಸಭೆಯಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘನೆ ಮಾಡಿರುವ 3 ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್‌ಗಳು, ಪುನರ್ವಸತಿ ಕೇಂದ್ರಗಳು ಕೆಪಿಎಂಇ ನಿಯಮ ಉಲ್ಲಂಘಿಸಿದ್ದು, ಆ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ದಂಡ ವಿಧಿಸಿ, ಪ್ರಕರಣ ದಾಖಲಿಸಲು ಹಾಗೂ ಕಾನೂನು ಕ್ರಮ ಕೈಗೊಳ್ಳಲು ಆದೇಶಿಸಿದ್ದರು. ಸಭೆಯಲ್ಲಿ ಒಟ್ಟು 33 ಪ್ರಕರಣ ಮಂಡಿಸಿದ್ದು, ಅವುಗಳ ಪೈಕಿ 12 ಸಂಸ್ಥೆಗಳಿಗೆ 6.78 ಲಕ್ಷ ರೂ. ದಂಡ ವಿಧಿಸಿದ್ದಾರೆ. 3 ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ.
ನಿಯಮ ಉಲ್ಲಂಘಿಸಿರುವ ಸಂಸ್ಥೆಗಳು: ತಿಗಳರಪಾಳ್ಯದ ಶ್ರೀ ವಿನಾಯಕ ಕ್ಲಿನಿಕ್‌ಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು ಅ.15ರಂದು ಭೇಟಿ ನೀಡಿ ಪರಿಶೀಲಿಸಿದಾಗ ಕೆಪಿಎಂಇ ನೋಂದಣಿ ಪಡೆಯದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿತ್ತು. ಹೀಗಾಗಿ ಕೆಪಿಎಂಇ ನಿಯಮಾನು ಸಾರ ಕ್ಲಿನಿಕ್ ಬಂದ್ ಮಾಡಿಸಲಾಗಿತ್ತು. ಈ ಕ್ಲಿನಿಕ್‌ನವರು ಕೆಪಿಎಂಇ ಕಾಯ್ದೆಯನ್ನು ವೈದ್ಯರಿಲ್ಲದೆ ಕ್ಲಿನಿಕ್ ನಡೆಸುತ್ತಿರುವುದರಿಂದ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ. ಇದೇ ಮಾದರಿಯಲ್ಲಿ ಎಸ್. ಸಿ.ರಸ್ತೆಯ ಮಧ್ಯಪಾನ ವಿಮುಕ್ತಿ ಕೇಂದ್ರ, ಹೊಂಗಸಂದ್ರದ ಚೇತನಾ ಕ್ಲಿನಿಕ್‌ದಲ್ಲೂ ನಿಯಮ ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.