Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Team Udayavani, Dec 23, 2024, 4:15 PM IST
ಅಳ್ನಾವರ (ಧಾರವಾಡ): ಎರಡು ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹತ್ತಿರ ಧಾರವಾಡ-ಗೋವಾ ಹೆದ್ದಾರಿಯಲ್ಲಿ ಜರುಗಿದೆ.
ಗೋವಾ ಕಡೆಯಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಟಿಟಿ ವಾಹನ ಮತ್ತು ಸವದತ್ತಿಯ ಶಿರಸಿಂಗಿಯಿಂದ ಗೋವಾಕ್ಕೆ ತೆರಳುತ್ತಿದ್ದ ಕ್ಯಾಂಟರ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ಕ್ಯಾಂಟರ್ ನಲ್ಲಿದ್ದ ಹನುಮಂತ ಮಲ್ಲಾಡ (36) ಮಹಾಂತೇಶ ಚವ್ಹಾಣ (35) ಹಾಗೂ ಮಹಾದೇವಪ್ಪ ಹಾಲೊಳ್ಳಿ (35) ಎಂಬವರು ಸ್ಥಳದಲ್ಲಿಯೇ ಮೃತರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಿರುವಿನಲ್ಲಿ ಪಲ್ಟಿಯಾದ ಕ್ಯಾಂಟರ್ ವಾಹನ ಎದುರಿನಿಂದ ಬರುತ್ತಿದ್ದ ಟಿಟಿ ವಾಹನಕ್ಕೆ ಬಡಿದಿದೆ. ಇದರಲ್ಲಿದ್ದ ಪ್ರವಾಸಿಗರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿರುವದಾಗಿ ವರದಿಯಾಗಿದೆ.
ಮಧ್ಯರಾತ್ರಿ ಸುಮಾರು 2 ಘಂಟೆಗೆ ಸಂಭವಿಸಿದ ಅಪಘಾತದ ಸುದ್ದಿ ತಿಳಿದ ತಕ್ಷಣ ಧಾರವಾಡ ಎಸ್ ಪಿ ಗೋಪಾಲ ಬ್ಯಾಕೋಡ ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸಾಗಿಸಲು ಕ್ರಮ ವಹಿಸಿದರು.
ಸಿಪಿಐ ಸಮೀರ ಮುಲ್ಲಾ ಪಿಎಸ್‌ಐ ಪ್ರವೀಣ ನೆಸರಗಿ ಸ್ಥಳದಲಿದ್ದು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.