Aranthodu:ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Team Udayavani, Dec 23, 2024, 11:13 PM IST
ಅರಂತೋಡು: ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸೋಮಶೇಖರ ಕೊಯಿಂಗಾಜೆ ನೇತೃತ್ವದ ಸಹಕಾರಿಗಳ ಅಭಿವೃದ್ಧಿ ರಂಗವು 9 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಸೋಮಶೇಖರ ಕೊಯಿಂಗಾಜೆ ಅವರು ವಿಜಯೋತ್ಸವದಲ್ಲಿ ಮಾತನಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ತನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎಂದು ಹೇಳಿದಾಗ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತ ಧನಪಾಲ್ ಆಕ್ಷೇಪ ವ್ಯಕ್ತಪಡಿಸಿದರು. ಆಗ ಧನಪಾಲ್ ಹಾಗೂ ಸೋಮಶೇಖರ ಕೊಯಿಂಗಾಜೆಯವರ ಮಧ್ಯೆ ಮಾತಿನ ಚಕಮಕಿ ಆರಂಭಗೊಂಡು ಅನಂತರ ಸ್ಥಳದಲ್ಲಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಏರ್ಪಟ್ಟಿತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿ ಕೈಮೀರದಂತೆ ನೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.