Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

5,605 ಉದ್ಯೋಗ ಸೃಷ್ಟಿ ನಿರೀಕ್ಷೆ,  ಸೆಮಿಕಂಡಕ್ಟರ್‌ ಕ್ಷೇತ್ರದಲ್ಲೂ ಹೂಡಿಕೆ

Team Udayavani, Dec 24, 2024, 2:50 AM IST

CM-siddu

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯಲ್ಲಿ ಸೆಮಿಕಂಡಕ್ಟರ್‌ ಕ್ಷೇತ್ರವೂ ಸೇರಿ ಒಟ್ಟು 9,823.31 ಕೋಟಿ ರೂ. ಬಂಡವಾಳ ಹೂಡಿಕೆಯ 9 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ರಾಜ್ಯದಲ್ಲಿ 5,605 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಐಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕೈಗಾರಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಕೆಐಎಡಿಬಿ ಸಿಇಒ ಡಾ.ಮಹೇಶ್‌ ಮೊದಲಾದವರು ಭಾಗವಹಿಸಿದ್ದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಅನುಮೋದನೆ ಪಡೆದವುಗಳಲ್ಲಿ ಡಿ.ಎನ್‌. ಸೊಲ್ಯೂಷನ್ಸ್‌ನ 998 ಕೋಟಿ ರೂ. (ಐಟಿಐಆರ್‌, ದೇವನಹಳ್ಳಿ), ಸೈಲೆಕ್ಟ್ರಿಕ್‌ ಸೆಮಿಕಂಡಕ್ಟರ್ಸ್‌ ಮ್ಯಾನುಫ್ಯಾಕ್ಚರಿಂಗ್‌ ನ 3,425. 60 ಕೋಟಿ ರೂ. (ಕೋಚನಹಳ್ಳಿ ಕೈಗಾರಿಕಾ ಪ್ರದೇಶ, ಮೈಸೂರು) ಮತ್ತು ಸನ್ಸೆರಾ ಎಂಜಿನಿಯರಿಂಗ್‌ ಸಂಸ್ಥೆಯ 2150 ಕೋಟಿ ರೂ. (ಹಾರೋಹಳ್ಳಿ) ಹೂಡಿಕೆ ಯೋಜನೆಗಳು ಹೊಸ ಪ್ರಸ್ತಾವನೆಗಳಾಗಿವೆ. ಇವುಗಳಿಂದ ಕ್ರಮವಾಗಿ 467, 460 ಮತ್ತು 3,500 ಉದ್ಯೋಗಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವ
ಉಳಿದ 6 ಯೋಜನೆಗಳು ಹೆಚ್ಚುವರಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಾಗಿವೆ. ಇವುಗಳಲ್ಲಿ ಮುಸಾಶಿ ಆಟೋ ಪಾರ್ಟ್ಸ್ (ದೊಡ್ಡಬಳ್ಳಾಪುರ) 122.66 ಕೋಟಿ ರೂ. ಜೆಎಸ್‌ಡಬ್ಲ್ಯು ಸಿಮೆಂಟ್‌ (ತೋರಣಗಲ್, ಬಳ್ಳಾರಿ) 486.82 ಕೋಟಿ ರೂ. ನೈಡೆಕ್‌ ಇಂಡಸ್ಟ್ರಿಯಲ್‌ ಆಟೋಮೇಷನ್‌ (ಬೇಲೂರು, ಧಾರವಾಡ) 200 ಕೋಟಿ ರೂ. ಎಪ್ಸಿಲಾನ್‌ ಕಾರ್ಬನ್‌ (ಸಂಡೂರು) 740 ಕೋಟಿ ರೂ. ಕೆ.ಬಿ.ಸ್ಟೀಲ್ಸ್‌ (ಹೊಸಪೇಟೆ, ವಿಜಯನಗರ) 852.49 ಕೋಟಿ ರೂ. ಮತ್ತು ಸಿಫಿ ಡೇಟಾ ಮ್ಯಾನೇಜ್‌ ಸರ್ವಿಸಸ್‌ (ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌) 847.74 ಕೋಟಿ ರೂ.ಗಳನ್ನು ರಾಜ್ಯದಲ್ಲಿ ಹೆಚ್ಚುವರಿಯಾಗಿ ಹೂಡಿಕೆ ಮಾಡಲಿವೆ. ಇವುಗಳಿಂದ ಕ್ರಮವಾಗಿ ಮೊದಲ 4 ಕಂಪನಿಗಳಲ್ಲಿ ಮಾತ್ರ 478, 225, 150 ಮತ್ತು 325 ಉದ್ಯೋಗಗಳು ಸೃಷ್ಟಿಯಾಗಲಿವೆ.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.