Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
ವಾಹನ ಸಂಚಾರವಿಲ್ಲದೆ ಜನರ ಪರದಾಟ, ಶಾಲೆಗಳಿಗೆ ರಜೆ
Team Udayavani, Dec 24, 2024, 9:40 AM IST
ಗದಗ/ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿಕೆ ನೀಡಿರುವ ಮಾತುಗಳು ಅಕ್ಷಮ್ಯ. ಅಮಿತ್ ಶಾ ಅವರು ಅಂಬೇಡ್ಕರ್ ಪ್ರತಿಮೆ ಎದುರು ಮಂಡಿಯೂರಿ ಕುಳಿತು ದೇಶದ ಜನರ ಬಳಿ ಕ್ಷಮೆ ಕೇಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳು ಮಂಗಳವಾರ ಬೆಳ್ಳಂಬೆಳಗ್ಗೆ ಗದಗ-ಬೆಟಗೇರಿ ಬಂದ್ ಗೆ ಚಾಕನೆ ನೀಡಿದವು.
‘ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟ, ರೈತ ಸಂಘಟನೆಗಳು, ಕಾರ್ಮಿಕರು, ಕಟ್ಟಡ ಕಾರ್ಮಿಕರ ಸಂಘಟನೆಗಳು, ಬಸವದಳ, ಆಟೊ ಚಾಲಕರು, ಮಾಲೀಕರ ಸಂಘ, ಜೈಭೀಮ್ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಭೀಮ್ ಆರ್ಮಿ, ಬೀದಿಬದಿ ವ್ಯಾಪಾರಸ್ಥರ ಸಂಘ, ಜಿಲ್ಲಾ ಸ್ಲಂ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿದಂತೆ ಹತ್ತಾರು ಸಂಘ ಸಂಸ್ಥೆಗಳ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಬೆಟಗೇರಿ ಬಸ್ ನಿಲ್ದಾಣ, ಗದಗ ಹೊಸ ಮತ್ತು ಹಳೆ ಬಸ್ ನಿಲ್ದಾಣ, ಮುಳಗುಂದ ನಾಕಾ, ಹಾತಲಗೇರಿ ನಾಕಾ, ಟಿಪ್ಪು ವೃತ್ತ ಸೇರಿ ನಗರದ ಪ್ರಮುಖ ವೃತ್ತ ಹಾಗೂ ಪ್ರದೇಶಗಳಲ್ಲಿ ದಲಿತ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಬಂದ್ ಆಚರಿಸಿದರು.
ಗದಗ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ಬದಲಾವಣೆ ಮಾಡಿದ್ದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.
ಬೆಳಿಗ್ಗೆ 6ರಿಂದ ಮುಂಡರಗಿ– ಕೊಪ್ಪಳ ಮಾರ್ಗದ ಬಸ್‌ಗಳು ಮುಖ್ಯ ಬಸ್ ನಿಲ್ದಾಣಕ್ಕೆ ಬರದೇ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನವರೆಗೆ, ರೋಣ, ಗಜೇಂದ್ರಗಡದಿಂದ ಗದಗಕ್ಕೆ ಬರುವ ಬಸ್‌ಗಳು ಬೆಟಗೇರಿ ಬಸ್ ಡೀಪೋವರೆಗೆ, ಹುಬ್ಬಳ್ಳಿ, ಅಣ್ಣಿಗೇರಿಯಿಂದ ಗದಗಕ್ಕೆ ಬರುವ ಬಸ್‌ಗಳು ಕೆಇಬಿ ಕ್ರಾಸ್‌ವರೆಗೆ, ಲಕ್ಷ್ಮೇಶ್ವರ, ಶಿರಹಟ್ಟಿಯಿಂದ ಗದಗಕ್ಕೆ ಬರುವ ಬಸ್‌ಗಳು ದೋಭಿ ಘಾಟ್‌ವರೆಗೆ ಬಸ್ ಸಂಚಾರ ನಿಗದಿಗೊಳಿಸಿದ್ದರಿಂದ ದೂರದೂರಿಗೆ ತೆರಳುವ ಪ್ರಯಾಣಿಕರು ಪರದಾಟ ನಡೆಸಿದರು.
ಕಲಬುರಗಿಯಲ್ಲಿ ಸಾರಿಗೆ ಸ್ಥಗಿತ
ಕಲಬುರಗಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನದ ಮಾಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಕಲಬುರ್ಗಿ ಬಂದ್ ವೇಳೆ ಪ್ರತಿಭಟನೆಕಾರರು ಬೆಳಿಗ್ಗೆಯಿಂದಲೇ ರಸ್ತೆಗೆ ಇಳಿದಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಸಂಪೂರ್ಣ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಆಟೋ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಆರಂಭಗೊಳಿಸಲು ದಲಿತ ಪರ ಸಂಘಟನೆ ಮುಖಂಡರು ಅವಕಾಶ ನೀಡಿಲ್ಲ.
ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳಗ್ಗೆ 8 ಗಂಟೆಗೆ ದಲಿತಪರ ಸಂಘಟನೆ ಹಾಗೂ ಇತರ ಸಂಘಟನೆಯ ಮುಖಂಡರು ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ.
ಈ ವೇಳೆಯಲ್ಲಿ ಕೂಡಲೇ ಅಮಿತ್ ಶಾ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕೆಂದು ಪ್ರಧಾನಿಗೆ ಆಗ್ರಹಿಸಿದರು. ಆ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ಪುರುಕ್ತ ಜಗತ್ತು ವಿರುದ್ಧ ಗನ್ ಸರ್ಕಲ್ ಹುಮ್ನಾಬಾದ್ ಸರ್ಕಲ್ ಖರ್ಗೆ ಪೆಟ್ರೋಲ್ ಬಂಕ್ ವಿರುದ್ಧ ರಾಮ ಮಂದಿರ ಹೈಕೋರ್ಟ್ ವಿರುದ್ಧ ಆಳಂದ್ ನಾಕಾ ವೃತ್ತವು ಸೇರಿದಂತೆ ಹಲವಡೆಗಳಲ್ಲಿ ದಲಿತ ಮುಖಂಡರು ಬೆಳಿಗ್ಗೆಯಿಂದಲೇ ನಾಕಾಬಂದಿ ಮಾಡಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಆದರೆ ಕಾಲೇಜು ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳಿಗೆ ಬಂದ್ ಹಿನ್ನೆಲೆಯಲ್ಲಿ ರಜೆ ಇಲ್ಲದ ಕಾರಣ ನೌಕರರು ಕೆಲಸದ ಸ್ಥಳಕ್ಕೆ ಹೋಗಲು ಪರದಾಡಿದ ದೃಶ್ಯ ಕಂಡು ಬಂದಿದೆ.
ಕೇಂದ್ರ ಬಸ್ ನಿಲ್ದಾಣದಿಂದ ಯಾವುದೇ ಬಸ್ ಸದ್ಯಕ್ಕೆ ಸಂಚರಿಸದ ಹಿನ್ನೆಲೆಯಲ್ಲಿ, ಕಳೆದ ರಾತ್ರಿ ಕಲಬುರ್ಗಿಗೆ ಆಗಮಿಸಿದ್ದ ಪ್ರಯಾಣಿಕರು ತಮ್ಮ ಊರುಗಳಿಗೆ ಹೋಗಲು ಪರದಾಡುತ್ತಿರುವ ದೃಶ್ಯ ಕಂಡು ಬಂತು.
ಇದನ್ನೂ ಓದಿ: Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.