New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Team Udayavani, Dec 24, 2024, 10:14 AM IST
ಬೆಂಗಳೂರು: ನಗರದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿ ಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಂಡರು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ಅತ್ಯಂತ ಜವಾಬ್ದಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಅಲ್ಲದೆ, ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಆಗುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಡಿಸಿಪಿಗಳೇ ಹೊಣೆಗಾರರು: ಅಗತ್ಯ ಬಂದೋಬಸ್ತ್ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಒಪ್ಪುವುದಿಲ್ಲ ಎಂದು ಎಚ್ಚರಿಸಿದರು. ಇನ್ನು ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್ ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.
ಮಹಿಳೆಯರ ಸುರಕ್ಷತೆಗೆ ಆದ್ಯತೆ: ಪರಮೇಶ್ವರ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ, ಪ್ರತಿ ವರ್ಷದ ದೇಶದಲ್ಲಿ ಕ್ರಿಸ್‌ಮಸ್ ಮತ್ತು ಹೊಸವರ್ಷಾಚರಣೆ ಬಹಳ ಸಂಭ್ರಮದಿಂದ ಮಾಡಲಾಗುತ್ತದೆ. ಬೆಂಗಳೂರಿನಲ್ಲೂ ಸಂಭ್ರಮ ಜೋರಾಗಿರುತ್ತದೆ. ಈ ಹಿಂದೆ ಕೆಲವು ಅಹಿತಕರ ಘಟನೆಗಳು ನಡೆದಿದ್ದು, ಹೀಗಾಗಿ ಈ ಬಾರಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಈ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ ಎಂದರು.
ಸಂಭ್ರಮಾಚರಣೆ ವೇಳೆ ಸಾರ್ವಜನಿಕ ಸಂತೋಷಕ್ಕೆ ಅಡಚಣೆಯಾಗಬಾರದು. ವಿಶೇಷವಾಗಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಗೊಂದಲ ಆಗದಂತೆ ಕೆಲವೊಂದು ನಿಯಮಗಳು ಇರುತ್ತವೆ. ಮೆಟ್ರೋ ವ್ಯವಸ್ಥೆ, ಓಲಾ, ಊಬರ್ ಹಾಗೂ ಇತರೆ ಸಾರಿಗೆ ವ್ಯವಸ್ಥೆ ಬಗ್ಗೆಯೂ ಪರಿಶೀಲಿಸಲಾಗಿದೆ ಎಂದು ಹೇಳಿದರು.
7 ಲಕ್ಷ ಮಂದಿ ಸೇರುವ ಸಾಧ್ಯತೆ: ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸುಮಾರು 7 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಹೀಗಾಗಿ, ಯಾವುದೇ ಅಹಿತರ ಘಟನೆಗಳು ನಡೆ ಯದಂತೆ ಎಚ್ಚರ ವಹಿಸಬೇಕು ಎಂದು ಸೂಚಿ ಸಿದ್ದೇನೆ ಎಂದರು. ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಹಾಗೂ ಎಲ್ಲಾ ವಿಭಾಗಗಳ ಡಿಸಿಪಿಗಳು ಹಾಗೂ ಎಸಿಪಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.