Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Team Udayavani, Dec 24, 2024, 1:20 PM IST
ದಾವಣಗೆರೆ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಡಿ.24ರ ಮಂಗಳವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಉಪ ವಿಭಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ಕುರಿತ ಚರ್ಚೆಯಲ್ಲಿ ಅಮಿತ್ ಶಾ ಅವರು, ಈಚೆಗೆ ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿದೆ. ಅಂಬೇಡ್ಕರ್ ಎನ್ನುವ ಬದಲಿಗೆ ದೇವರ ಜಪ ಮಾಡಿದರೆ ಏಳು ಜನ್ಮಕ್ಕೆ ಆಗುವಷ್ಟು ಪುಣ್ಯ ದೊರೆಯುತ್ತದೆ ಎಂದು ಹೇಳುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಸುಮುಟೋ ಪ್ರಕರಣ ದಾಖಲಿಸಬೇಕು. ಕೂಡಲೇ ಲೋಕಸಭಾ ಸದಸ್ಯತ್ವ ರದ್ದುಪಡಿಸುವ ಜೊತೆಗೆ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ರಾಘವೇಂದ್ರ ಕಡೇಮನಿ, ಕೆಟಿಜೆ ನಗರ ರವಿ, ಮಲ್ಲಿಕಾರ್ಜುನ ವಂದಾಲಿ, ಟಿ. ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
ಅಮೆರಿಕದಲ್ಲಿ ಕ್ರಿಸ್ ಮಸ್, ಹೊಸ ವರ್ಷದ ಹುರುಪು-ಥ್ಯಾಂಕ್ಸ್ ಗಿವಿಂಗ್ ಟು ನ್ಯೂ ಇಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.