Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್
ಬೀದಿ ಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ
Team Udayavani, Dec 24, 2024, 1:38 PM IST
ಮಹಾನಗರ: ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಬೀದಿ ಬದಿ ವ್ಯಾಪಾರಿಗಳಿಗೆ ಬೆಂಬಲ ಉಪಘಟಕದಡಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಜಂಟಿ ಆಶ್ರಯದಲ್ಲಿ ಪಾಲಿಕೆ ವ್ಯಾಪ್ತಿಯ ಕಂಟೋನ್ಮೆಂಟ್ ವಾರ್ಡ್-46ರ ಇಂದಿರಾ ಕ್ಯಾಂಟೀನ್ ಬಳಿ ನಿರ್ಮಿಸಲಾದ ಬೀದಿ ಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆಯನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಮಾತನಾಡಿ, ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಸೂರು ಕಲ್ಪಿಸುವ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ. ಇನ್ನಷ್ಟು ಮಂದಿಗೆ ಗುರುತಿನ ಚೀಟಿ ನೀಡಿ ನಗರದ ಹಲವು ಕಡೆಗಳಲ್ಲಿ ಬೀದಿ ಬದಿ ವ್ಯಾಪಾರ ವಲಯ ನಿರ್ಮಾಣ ಮಾಡಲಾಗುವುದು. ಈ ಮೂಲಕ ಬೀದಿ ಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸ್ಪಂದಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ, ದೀನದಯಾಳ್ ಉಪಾಧ್ಯಾಯ್ ಅವರ ಕಲ್ಪನೆಯಂತೆ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರ ವಲಯದಲ್ಲಿ ನಗರದ 93 ವ್ಯಾಪಾರಸ್ಥರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿ ನೀರಿನ ವ್ಯವಸ್ಥೆ, ಬೀದಿ ದೀಪ ಸಹಿತ ಮೂಲ ಸೌಲಭ್ಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಭಾಗದಲ್ಲಿ ಪ್ರತ್ಯೇಕ ವಲಯ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಈಡೇರಿಸುವುದು ಸುಲಭ ಇರಲಿಲ್ಲ. ಒಂದೇ ಕಡೆ ವ್ಯಾಪಾರಕ್ಕೆ ವ್ಯಾಪಾರಿಗಳನ್ನು ಮನವೊಲಿಸಿ ಉತ್ತಮ ವ್ಯವಸ್ಥೆ ನೀಡಿದ್ದೇವೆ. ಹೊಸ ವಲಯವನ್ನು ವ್ಯಾಪಾರಸ್ಥರೂ ಒಪ್ಪಿಗೆ ಸೂಚಿಸಿದ್ದು, ಬೀದಿ ಬದಿ ವ್ಯಾಪಾರಸ್ಥರ ಪದಾಧಿಕಾರಿಗಳೂ ಸಹಕಾರ ನೀಡಿದ್ದಾರೆ. ಇಂದಿನಿಂದಲೇ ಇಲ್ಲಿ ವ್ಯಾಪಾರ ನಡೆಸಬಹುದು. ಯಾವುದೇ ವ್ಯಾಪಾರಸ್ಥರನ್ನು ಅತಂತ್ರ ಸ್ಥಿತಿಯಲ್ಲಿರಲು ಬಿಡುವುದಿಲ್ಲ ಎಂದು ವಿವರಿಸಿದರು.
ಆಶ್ರಯ ನೀಡುವ ಯೋಜನೆ
ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್ ಮಾತನಾಡಿ, ಬೀದಿ ಬದಿ ವ್ಯಾಪಾ ರಿಗಳಿಗೆ ಆಶ್ರಯ ನೀಡುವ ಯೋಜನೆ ಇದಾಗಿದೆ. ಮಾಜಿ ಮೇಯರ್‌ಗಳು, ಆಡಳಿತ-ವಿಪಕ್ಷ ಸದಸ್ಯರು, ಅಧಿಕಾರಿಗಳು, ಸಂಘದ ಸದಸ್ಯರ ಸಹಕಾರದಿಂದ ಈ ಯೋಜನೆ ಸಕಾರವಾಗಿದೆ. ಇನ್ನಷ್ಟು ಕಡೆ ವ್ಯಾಪಾರ ವಲಯ ನಿರ್ಮಾಣಗೊಳಿಸಲು ಪಾಲಿಕೆ ಮುಂದಾಗಬೇಕಿದೆ ಎಂದು ಹೇಳಿದರು.
ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಮಾತನಾಡಿ, ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅನು ಕೂಲಕರ ವಾತಾವರಣ ನಿರ್ಮಿಸಲಾಗಿದೆ ಎಂದು ಹೇಳಿದರು.
ಮೂಲ ಸೌಲಭ್ಯ
‘ಬೀದಿ ಬದಿ ವ್ಯಾಪಾರಿಗಳಿಗೆ ಬೆಂಬಲ ನೀಡುವ ಉದ್ದೇಶ, ಗೌರವದ ಬದುಕು ನಡೆಸುವುದಕ್ಕೆ ಬೀದಿ ಬದಿ ವ್ಯಾಪಾರ ವಲಯ ನಿರ್ಮಾಣಗೊಂಡಿದೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ಬೀದಿ ಬದಿ ವ್ಯಾಪಾರ ಕಾನೂನು ಜಾರಿಗೆ ತಂದರು. ಈ ಮೂಲಕ ಹಲವು ರಾಜ್ಯದಲ್ಲಿ ಬೀದಿ ಬದಿ ವ್ಯಾಪಾರ ವಲಯ ನಿರ್ಮಾಣಗೊಂಡಿತು. ಸ್ಟೇಟ್‌ಬ್ಯಾಂಕ್ ಜನನಿಬಿಡಿ ಪ್ರದೇಶವಾಗಿದ್ದು, ಖಂಡಿತವಾಗಿಯೂ ಉತ್ತಮ ವ್ಯಾಪಾರ ಸಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಡೆ ವ್ಯಾಪಾರ ವಲಯ ನಿರ್ಮಾಣದ ಜತೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಜತೆ ಮಾತುಕತೆ ನಡೆಸುತ್ತೇನೆ’ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
ಅಮೆರಿಕದಲ್ಲಿ ಕ್ರಿಸ್ ಮಸ್, ಹೊಸ ವರ್ಷದ ಹುರುಪು-ಥ್ಯಾಂಕ್ಸ್ ಗಿವಿಂಗ್ ಟು ನ್ಯೂ ಇಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.